ಪ್ರಧಾನಿ ಮೋದಿ 
ದೇಶ

70ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಧಾನಿ ಮೋದಿ: ನೇಪಾಳ ಪ್ರಧಾನಿ, ರಷ್ಯಾ ಅಧ್ಯಕ್ಷರು ಸೇರಿದಂತೆ ಗಣ್ಯರಿಂದ ಶುಭಾಶಯ

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 70ನೇ ಹುಟ್ಟುಹಬ್ಬದ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನೇಪಾಳ, ರಷ್ಯಾ ಅಧ್ಯಕ್ಷರು ಸೇರಿದಂತೆ ಬಹುತೇಕ ದೇಶದ ನಾಯಕರು ಶುಭಾಶಯಗಳನ್ನು ಕೋರುತ್ತಿದ್ದಾರೆ.  

ನವದೆಹಲಿ: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 70ನೇ ಹುಟ್ಟುಹಬ್ಬದ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನೇಪಾಳ, ರಷ್ಯಾ ಅಧ್ಯಕ್ಷರು ಸೇರಿದಂತೆ ಬಹುತೇಕ ದೇಶದ ನಾಯಕರು ಶುಭಾಶಯಗಳನ್ನು ಕೋರುತ್ತಿದ್ದಾರೆ. 

ಈ ಪೈಕಿ ಪ್ರಧಾನಿ ಮೋದಿಯವರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಶುಭಾಶಯ ಕೋರಿ ಪತ್ರವೊಂದನ್ನು ಬರೆದಿದ್ದಾರೆ. 

ಪ್ರಧಾನಮಂತ್ರಿಯಾಗಿ ನೀವು ಮಾಡಿದ ಸಾಧನೆಯೂ ಅಂತಾರಾಷ್ಟ್ರೀಯ ಮಟ್ಟದ ಗೌರವಕ್ಕೆ ಅರ್ಹ. ನಿಮ್ಮ ನಾಯಕತ್ವದಲ್ಲಿ ಭಾರತ ಆರ್ಥಿಕ, ಸಾಮಾಜಿಕ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದೆ. ಭಾರತ ರಷ್ಯಾ ನಡುವಿನ ಶತಮಾನಗಳಷ್ಟು ಹಳೆಯದಾದ ಬಾಂಧವ್ಯವನ್ನು ಇನ್ನಷ್ಟು ವೃದ್ಧಿಗೊಳಿಸಲು ಶ್ರಮಿಸಿದ ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಸಾಲದು. 

ಅಭಿವೃದ್ಧಿ ಹಾಗೂ ಶಾಂತಿ ಸ್ಥಾಪನೆಗಾಗಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ" ವ್ಲಾಡಿಮಿರ್ ಪುಟಿನ್ ಶುಭಾಶಯ ಸಂದೇಶದಲ್ಲಿ ತಿಳಿಸಿದ್ದಾರೆ. ಅಲ್ಲದೆ, ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಆರೋಗ್ಯವಂತರಾಗಿ, ಸಂತೋಷದಿಂದ ದೀರ್ಘಕಾಲ ಬಾಳಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ಇದರಂತೆ ನೇಪಾಳದ ಪ್ರಧಾನಮಂತ್ರಿ ಕೆ.ಪಿ.ಶರ್ಮಾ ಒಲಿಯವರು ಶುಭಾಶಯ ಕೋರಿದ್ದು, ಜನ್ಮದಿನದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರಿಗೆ ಆತ್ಮೀಯ ಶುಭಾಶಯಗಳು. ನಾನು ನಿಮ್ಮ ಸಂತೋಷ ಹಾಗೂ ಉತ್ತಮ ಆರೋಗ್ಯವನ್ನು ಬಯಸುತ್ತೇನೆ. ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಒಟ್ಟಾಗಿ ಕೆಲಸವನ್ನು ಮುಂದುವರಿಸುಸೋಣ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕೊಡಿ...ಆಶೀರ್ವಾದ.. ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ ಕೆ ಶಿವಕುಮಾರ್.. ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್-Photos

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT