ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಒಂದೇ ದಿನ 96,424 ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 52 ಲಕ್ಷ, 84,372 ಸಾವು

ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಏರುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 96,424 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಭಾರತದಲ್ಲಿ ಸೋಂಕಿತರ ಸಂಖ್ಯೆ 52 ಲಕ್ಷ ದಾಟಿದ್ದು, ಒಟ್ಟಾರೋ ಸೋಂಕಿತರ ಸಂಖ್ಯೆ 52,14,678ಕ್ಕೆ ತಲುಪಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಏರುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 96,424 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಭಾರತದಲ್ಲಿ ಸೋಂಕಿತರ ಸಂಖ್ಯೆ 52 ಲಕ್ಷ ದಾಟಿದ್ದು, ಒಟ್ಟಾರೋ ಸೋಂಕಿತರ ಸಂಖ್ಯೆ 52,14,678ಕ್ಕೆ ತಲುಪಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

ಇನ್ನು ಒಂದೇ ದಿನ ಬರೋಬ್ಬರಿ 1,174 ಮಂದಿ ಸಾವನ್ನಪ್ಪಿದ್ದು, ಮಹಾಮಾರಿ ವೈರಸ್ ಈವರೆಗೂ 84,372 ಮಂದಿಯನ್ನು ಬಲಿಪಡೆದುಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಈ ನಡುವೆ 52,14,678 ಮಂದಿ ಸೋಂಕಿತರ ಪೈಕಿ ಈವರೆಗೂ 41,12,552 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಭಾರತದಲ್ಲಿನ್ನೂ 10,17,754 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿಸಿದೆ. 

ಸೆಪ್ಟೆಂಬರ್ ಮೊದಲ 15 ದಿನದ ಅವಧಿಯಲ್ಲಿ ಕೊರೋನಾ ಕೇಸು ಹಾಗೂ ಸಾವಿನ ಪ್ರಕರಣಗಳಲ್ಲಿ ಭಾರತ, ವಿಶ್ವದಲ್ಲಿಯೇ ಮೊದಲ ಸ್ಥಾನ ಗಳಿಸಿದೆ. 

ಸೆ.1ರಿಂದ 15ರ ಅವಧಿಯಲ್ಲಿ ಭಾರತದಲ್ಲಿ 13,08,991 ಕೊರೋನಾ ಪ್ರಕರಣಗಳು 16,307 ಸಾವು ವರದಿಯಾಗಿದೆ. ಅಮೆರಿಕಾದಲ್ಲಿ 5,57,657 ಕೇಸು 11,461 ಸಾವು ಹಾಗೂ ಬ್ರೆಜಿಲ್ ನಲ್ಲಿ 4,83,299 ಪ್ರಕರಣಗಳು ದೃಢಪಟ್ಟಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ