ದೇಶ

ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಪಂಜಾಬ್ ನ 70 ವರ್ಷದ ವೃದ್ಧ ಆತ್ಮಹತ್ಯೆ

Sumana Upadhyaya

ಚಂಡೀಗಢ: ಕೇಂದ್ರ ಸರ್ಕಾರದ ಹೊಸ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 70 ವರ್ಷದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್ ರಾಜ್ಯದ ಮುಕ್ತಸರ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ಮುಕ್ತಸರ್ ಜಿಲ್ಲೆಯ ಅಕ್ಕನ್ ವಾಲಿ ಗ್ರಾಮದ ಪ್ರೀತಂ ಸಿಂಗ್ ಎಂಬ ರೈತರು ನಿನ್ನೆ ಬೆಳಗ್ಗೆ ವಿಷ ಸೇವಿಸಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪಂಜಾಬ್ ನ ಬಾದಲ್ ಗ್ರಾಮದಲ್ಲಿ ಭಾರತೀಯ ಕಿಸಾನ್ ಒಕ್ಕೂಟ ಆಯೋಜಿಸಿರುವ ಕೇಂದ್ರ ಸರ್ಕಾರದ ಹೊಸ ಸುಧಾರಿತ ಕೃಷಿ ಮಸೂದೆ ವಿರೋಧಿ ಪ್ರತಿಭಟನೆಯಲ್ಲಿ ಪ್ರೀತಂ ಸಿಂಗ್ ಕಳೆದ 15ರಿಂದ ಭಾಗವಹಿಸಿದ್ದರು. ಆತ್ಮಹತ್ಯೆಯ ಹಾದಿ ಏಕೆ ಹಿಡಿದರು ಎಂದು ಇನ್ನೂ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಅವರು ತೀವ್ರ ಸಾಲ ಮಾಡಿಕೊಂಡಿದ್ದರು ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಮೃತ ವೃದ್ಧನ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕೆಂದು ಬಿಕೆಯು ಪ್ರಧಾನ ಕಾರ್ಯದರ್ಶಿ ಸುಖ್ ದೇವ್ ಸಿಂಗ್ ಒತ್ತಾಯಿಸಿದ್ದಾರೆ.

SCROLL FOR NEXT