ರಾಷ್ಟ್ರಪತಿ ರಾಮನಾಥ್ ಕೋವಿಂದ್ 
ದೇಶ

ನೂತನ ಶಿಕ್ಷಣ ನೀತಿ 21ನೇ ಶತಮಾನದ ಅಗತ್ಯತೆ ಪೂರೈಸಲಿದೆ: ರಾಮನಾಥ್ ಕೋವಿಂದ್

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಶಿಕ್ಷಣ ನೀತಿಯ ಅಗತ್ಯತೆಯನ್ನು ಮರು ಹೊಂದಾಣಿಕೆ ಮಾಡುವ ಜೊತೆಗೆ 21ನೇ ಶತಮಾನದ ಅವಶ್ಯಕತೆಗಳನ್ನು ಸಮಗ್ರವಾಗಿ ಪೂರೈಸಲಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಶಿಕ್ಷಣ ನೀತಿಯ ಅಗತ್ಯತೆಯನ್ನು ಮರು ಹೊಂದಾಣಿಕೆ ಮಾಡುವ ಜೊತೆಗೆ 21ನೇ ಶತಮಾನದ ಅವಶ್ಯಕತೆಗಳನ್ನು ಸಮಗ್ರವಾಗಿ ಪೂರೈಸಲಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಉನ್ನತ ಶಿಕ್ಷಣ ಕುರಿತ ಸಮ್ಮೇಳನ ದೆಹಲಿಯಲ್ಲಿ ವರ್ಚುವೆಲ್ ವೇದಿಕೆ ಮೂಲಕ ಪಾಲ್ಗೊಂಡು ಮಾತನಾಡಿದ ಅವರು, ಉಜ್ವಲ ಜ್ಞಾನ, ಸಮಾನ ಅಭಿವೃದ್ಧಿಯ ದೃಷ್ಟಿಕೋನವನ್ನು ಇದು ಒಳಗೊಂಡಿದ್ದು, ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಒದಗಿಸಲಿದೆ ಎಂದರು. ಈ ನೀತಿ ಹಲವು  ಆಯಾಮಗಳನ್ನು ಒಳಗೊಂಡಿದ್ದು, ವಿದ್ಯಾರ್ಥಿಗಳ ಆಲೋಚನಾ ಕ್ರಮದಲ್ಲಿ ಸಮಗ್ರ ಬದಲಾವಣೆ ತರಲಿದೆ. ಕ್ರಿಯಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡುವ ಗುಣಮಟ್ಟದ ಪಾಠ ಪ್ರವಚನಕ್ಕೆ ಗಮನ ಹರಿಸಲಿದೆ ಎಂದು ಹೇಳಿದರು.

ನೂತನ ಶಿಕ್ಷಣ ನೀತಿ ಜಾರಿಗೊಂಡರೆ ಜಾಗತಿಕ ಹಂತದಲ್ಲಿ ಭಾರತದ ಉನ್ನತ ಶಿಕ್ಷಣದ ಗುಣಮಟ್ಟ ವೃದ್ಧಿಸಲಿದ್ದು, ಕ್ರೀಡಾ ಚಟುವಟಿಕೆಗಳಿಗೂ ಸಹ ಆದ್ಯತೆ ದೊರೆಯಲಿದೆ. ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಮತ್ತು ರಾಷ್ಟ್ರೀಯ ಸಮಸ್ಯೆಗಳಿಗೆ ಪರಿಹಾರ ನೀಡಬೇಕು, ಸಮುದಾಯ ಪಾಲ್ಗೊಳ್ಳುವಿಕೆ ಮತ್ತು ಸ್ಥಳೀಯ  ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಳ್ಳಲು ಪ್ರೋತ್ಸಾಹಿಸಬೇಕು, ಎಲ್ಲರನ್ನು ಒಳಗೊಂಡ ಗುಣಮಟ್ಟದ ಶಿಕ್ಷಣ ದೊರಕಿಸುವುದು ನೂತನ ನೀತಿಯ ಧ್ಯೇಯವಾಗಬೇಕು ಎಂದರು.

ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾತ್ರ ಪ್ರಮುಖವಾಗಿದೆ. ಎಲ್ಲ ವಿಶ್ವವಿದ್ಯಾಲಯಗಳು, ರಾಷ್ಟ್ರೀಯ ಪಠ್ಯ ಪುಸ್ತಕ ಸಿದ್ಧಪಡಿಸುವ ಎನ್.ಸಿ.ಆರ್.ಟಿ.ಇ., ಮತ್ತಿತರ ಶೈಕ್ಷಣಿಕ ಸಂಸ್ಥೆಗಳು ಸಹ  ನೂತನ ನೀತಿ ಅಳವಡಿಕೆಯಲ್ಲಿ ತನ್ನ ಕೊಡುಗೆ ನೀಡಬೇಕು. ಎಲ್ಲರೂ ಒಂದೇ ತಂಡದಂತೆ ಕಾರ್ಯ ನಿರ್ವಹಿಸಬೇಕು ಎಂದರು.

ಶಿಕ್ಷಣ ನೀತಿ ನಿರೂಪಣೆ ಸಮಿತಿ ಅಧ್ಯಕ್ಷ, ಬಾಹ್ಯಾಕಾಶ ವಿಜ್ಞಾನಿ ಡಾ. ಕೆ. ಕಸ್ತೂರಿ ರಂಗನ್, ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು, ಶಿಕ್ಷಣ ತಜ್ಞರು ಮತ್ತಿತರ ಪ್ರಮುಖರು ಸಹ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT