ಸಾಂದರ್ಭಿಕ ಚಿತ್ರ 
ದೇಶ

ಗೋಧಿಯ ಕನಿಷ್ಠ ಬೆಂಬಲ ಬೆಲೆ 50 ರೂ. ಹೆಚ್ಚಳ, ಪ್ರತಿ ಕ್ವಿಂಟಾಲ್ ಬೆಲೆ 1,975 ರೂ.: ಕೇಂದ್ರ ಸರ್ಕಾರ

ಕೃಷಿ ಬೆಳೆಯನ್ನು ಹೆಚ್ಚಿಸಲು ರೈತರನ್ನು ಉತ್ತೇಜಿಸಲು ಪ್ರತಿ ಕ್ವಿಂಟಾಲ್  ಗೋಧಿಯ ಕನಿಷ್ಠ ಬೆಂಬಲ ಬೆಲೆಯನ್ನು 50 ರೂ. ಹೆಚ್ಚಳ ಮಾಡಿದೆ.

ನವದೆಹಲಿ: ಕೃಷಿ ಬೆಳೆಯನ್ನು ಹೆಚ್ಚಿಸಲು ರೈತರನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಪ್ರತಿ ಕ್ವಿಂಟಾಲ್ ಗೋಧಿಯ ಕನಿಷ್ಠ ಬೆಂಬಲ ಬೆಲೆಯ 50 ರೂಪಾಯಿ ಹೆಚ್ಚಿಸಿದೆ. ಇದರಿಂದಾಗಿ ಪ್ರತಿ ಕ್ವಿಂಟಾಲ್ ಗೋಧಿಯ ಕನಿಷ್ಠ ಬೆಂಬಲ ಬೆಲೆ 1,975 ರೂ. ಆಗಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಮೇಲಿನ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಲೋಕಸಭೆಯಲ್ಲಿ ಈ ವಿಷಯವನ್ನು ಪ್ರಕಟಿಸಿದರು.

ಮಹತ್ವದ ಎರಡು ಕೃಷಿ ಮಸೂದೆಗಳು ಸಂಸತ್ತಿನಲ್ಲಿ ಅಂಗೀಕಾರಗೊಂಡ  ನಂತರ ಪಂಜಾಬ್, ಹರಿಯಾಣ ಮತ್ತಿತರ ರಾಜ್ಯಗಳಲ್ಲಿ ಪ್ರತಿಪಕ್ಷಗಳು ಮತ್ತು ರೈತ ಸಂಘಟನೆಗಳಿಂದ ವ್ಯಾಪಕ ಪ್ರತಿಭಟನೆ ಭುಗಿಲೆದ್ದಿರುವ ಬೆನ್ನಲ್ಲೇ, ಸರ್ಕಾರ ಈ ಘೋಷಣೆಯನ್ನು ಪ್ರಕಟಿಸಿದೆ. 

ರೈತರ ಉತ್ಪನ್ನಗಳ ವ್ಯಾಪಾರ ಮತ್ತು ವ್ಯವಹಾರ ( ಪ್ರೋತ್ಸಾಹಕ ಸೌಲಭ್ಯ ) ಮಸೂದೆ 2020 ಮತ್ತು ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020ನ್ನು ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಲಾಗಿದೆ.

ಆರು ರಾಬಿ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಆರ್ಥಿಕ ವ್ಯವಹಾರಗಳ ಮೇಲಿನ ಸಂಪುಟ ಸಮಿತಿ ಸಭೆ ಅನುಮೋದನೆ ನೀಡಿದೆ.  ಪ್ರತಿಪಕ್ಷಗಳ ಹರಡುತ್ತಿರುವ ಅಪ ಪ್ರಚಾರದ ವಿರುದ್ಧವಾಗಿ ಸರ್ಕಾರ ಯಾವಾಗಲು ಕನಿಷ್ಠ ಬೆಂಬಲ ಬೆಲೆ ಮತ್ತು ಎಪಿಎಂಸಿ ಕಾರ್ಯವಿಧಾನಗಳನ್ನು ಮುಂದುವರೆಸಲಿದೆ ಎಂದು ತೋಮರ್ ಹೇಳಿದರು. ಕೆಲ ಕಾಂಗ್ರೆಸ್ ಸದಸ್ಯರು ಸದನದಿಂದ ಹೊರ ನಡೆದ ನಂತರ ತೋಮರ್ ಕನಿಷ್ಠ ಬೆಂಬಲ ಬೆಲೆಯನ್ನು ಪ್ರಕಟಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT