ಕೊರೊನಾ ಸೋಂಕು 
ದೇಶ

ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ 86,961 ಹೊಸ ಸೋಂಕು ಪ್ರಕರಣಗಳು ಪತ್ತೆ

ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 86,961 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 1,130 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 86,961 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 1,130 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 86,961 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 54,87,581ಕ್ಕೆ ಏರಿಕೆಯಾಗಿದೆ. ಈ ಪೈಕಿ ಒಟ್ಟಾರೆ 43,96,399 ಮಂದಿ ಸೋಂಕಿತರು  ಗುಣಮುಖರಾಗಿದ್ದಾರೆ.

ಅಂತೆಯೇ ನಿನ್ನೆ ಒಂದೇ ದಿನ ದೇಶಾದ್ಯಂತ 1,130 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 87,882ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ ಒಟ್ಟು 10,03,299 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

24 ಗಂಟೆಗಳಲ್ಲಿ 7 ಲಕ್ಷಕ್ಕೂ ಅಧಿಕ ಕೋವಿಡ್ ಪರೀಕ್ಷೆ
ಇನ್ನು ದೇಶಾದ್ಯಂತ ನಿನ್ನೆ 7,31,534 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಒಟ್ಟಾರೆ 6,43,92,594 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!