ಲೋಕಸಭೆ 
ದೇಶ

ಲೋಕಸಭೆಯಲ್ಲಿ ಕೋಲಾಹಲ, ಮುಂಗಾರು ಅಧಿವೇಶನ ನಾಳೆಯೇ ಕೊನೆಗೊಳ್ಳುವ ಸಾಧ್ಯತೆ

ಸಂಸದರಲ್ಲಿ ಕೊರೋನಾ ವೈರಸ್ ಹರಡುವ ಆತಂಕದ ಮಧ್ಯೆಯೇ ಆರಂಭವಾದ ಸಂಸತ್ ಮುಂಗಾರು ಅಧಿವೇಶನ ಈಗ ಪ್ರತಿಪಕ್ಷಗಳ ಕೋಲಾಹಲದಿಂದಾಗಿ ಬುಧವಾರವೇ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಸಂಸದರಲ್ಲಿ ಕೊರೋನಾ ವೈರಸ್ ಹರಡುವ ಆತಂಕದ ಮಧ್ಯೆಯೇ ಆರಂಭವಾದ ಸಂಸತ್ ಮುಂಗಾರು ಅಧಿವೇಶನ ಈಗ ಪ್ರತಿಪಕ್ಷಗಳ ಕೋಲಾಹಲದಿಂದಾಗಿ ಬುಧವಾರವೇ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ನಾಳೆ ರಾಜ್ಯಸಭೆಯಲ್ಲಿ ಐದು ಮಸೂದೆಗಳು ಅಂಗೀಕಾರಗೊಂಜ ನಂತರ ರಾಜ್ಯಸಭಾ ಕಲಾಪ ಅನಿರ್ಧಾಷ್ಟಾವಧಿಗೆ ಮುಂದೂಡಿಕೆಯಾಗಲಿದೆ ಎಂದು ಮಂಗಳವಾರ ಮೂಲಗಳು ತಿಳಿಸಿವೆ.

ಇನ್ನು ಲೋಕಸಭೆ ನಾಳೆ ಮಧ್ಯಾಹ್ನ 3 ಗಂಟೆಗೆ ಆರಂಭವಾಗುತ್ತಿದ್ದು, ಶೂನ್ಯ ಅವಧಿಯ ನಂತರ ಸಂಜೆ 5 ರ ಸುಮಾರಿಗೆ ಅನಿರ್ಧಿಷ್ಟಾವಧಿಗೆ ಮುಂದೂಡಲಾಗುವುದು ಎಂದು ಅವರು ಹೇಳಿದ್ದಾರೆ.

ಸೆಪ್ಟೆಂಬರ್ 14 ರಿಂದ ಪ್ರಾರಂಭವಾದ ಮುಂಗಾರು ಅಧಿವೇಶನವು ಉಭಯ ಸದನಗಳಲ್ಲಿ ಹಲವಾರು ಮಸೂದೆಗಳನ್ನು ಅಂಗೀಕರಿಸಿತು. ಇದರಲ್ಲಿ ಇತ್ತೀಚೆಗೆ ಹೊರಡಿಸಲಾದ ಸುಗ್ರೀವಾಜ್ಞೆಗಳು ಸೇರಿವೆ. ಪ್ರಸಕ್ತ ಅಧಿವೇಶನ ಅಕ್ಟೋಬರ್ 1ಕ್ಕೆ ಅಂತ್ಯಗೊಳ್ಳಬೇಕಿತ್ತು. ಆದರೆ ಕೊರೋನಾ ಆತಂಕ ಮತ್ತು ಪ್ರತಿಪಕ್ಷಗಳ ಗದ್ದಲ, ಧರಣಿಯಿಂದಾಗಿ ನಾಳೆಯೇ ಅಂತ್ಯಗೊಳ್ಳುವ ಸಾಧ್ಯತೆ ಇದೆ.

ಕಳೆದ ಕೆಲವು ದಿನಗಳಲ್ಲಿ ಕೇಂದ್ರದ ಕೆಲವು ಸಚಿವರು ಸೇರಿದಂತೆ ಹಲವು ಸಂಸದರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಟ್ಟಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel