ರಿಯಾ ಚಕ್ರವರ್ತಿ 
ದೇಶ

ಸುಶಾಂತ್ ಸಿಂಗ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್ 6ರವರೆಗೆ ನ್ಯಾಯಾಂಗ ಬಂಧನ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು  ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು ಆದೇಶಿಸಿದೆ.

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು  ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು ಆದೇಶಿಸಿದೆ.

ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋಯಿಕ್ ಇಂದು ಬಾಂಬೆ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಡ್ರಗ್ಸ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಬಂಧಿಸಿದೆ.

"ರಿಯಾ ಮತ್ತು ಶೋಯಿಕ್ ಚಕ್ರವರ್ತಿ ಅವರು ಎನ್‌ಡಿಪಿಎಸ್ ಪ್ರಕರಣದಲ್ಲಿ ಜಾಮೀನು ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ. ಇದು ಸೆಪ್ಟೆಂಬರ್ 23 ರಂದು ವಿಚಾರಣೆಗೆ ಬರಲಿದೆ. ವಿಚಾರಣೆಯ ನಂತರ ಅರ್ಜಿಗಳ ವಿವರಗಳನ್ನು ಹಂಚಿಕೊಳ್ಳಲಾಗುವುದು" ಎಂದು ರಿಯಾ ಸೋದರನ ಪರ ವಕೀಲ  ಸತೀಶ್ ಮನೆಶಿಂಧೆ ತಿಳಿಸಿದ್ದಾರೆ. .

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ