ಸಂಗ್ರಹ ಚಿತ್ರ 
ದೇಶ

ದೇಶದಲ್ಲಿ ಕೊರೋನಾ ಅಬ್ಬರದಲ್ಲಿ ಇಳಿಕೆ: 24 ಗಂಟೆಗಳಲ್ಲಿ 83,347 ಮಂದಿಯಲ್ಲಿ ಸೋಂಕು ಪತ್ತೆ, ಸೋಂಕಿತರ ಸಂಖ್ಯೆ 5.64 ಲಕ್ಷ

ದೇಶದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳ ಅಬ್ಬರ ತಿಂಗಳ ಬಳಿಕ ಇಳಿಕೆ ಕಂಡಿದ್ದು, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 83,347 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,646,011ಕ್ಕೆ ಏರಿಕೆಯಾಗಿದೆ. 

ನವದೆಹಲಿ: ದೇಶದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳ ಅಬ್ಬರ ತಿಂಗಳ ಬಳಿಕ ಇಳಿಕೆ ಕಂಡಿದ್ದು, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 83,347 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,646,011ಕ್ಕೆ ಏರಿಕೆಯಾಗಿದೆ. 

ಇನ್ನು ಒಂದೇ ದಿನ ಬರೋಬ್ಬರಿ 1,082 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 90,020ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಮಾಹಿತಿ ನೀಡಿದೆ. 

ಇನ್ನು 5,646,011 ಮಂದಿ ಸೋಂಕಿತರ ಪೈಕಿ 45,87,614 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 9,68,377 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

ಇನ್ನು ಗುಣಮುಖ ಪ್ರಮಾಣ ಶೇ.80.86ಕ್ಕೆ ಏರಿಕೆಯಾಗಿದ್ದು, ಚೇತರಿಕೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 9.68 ಲಕ್ಷಕ್ಕೆ ಇಳಿಕೆ ಕಂಡಿದೆ. ಕಳೆದ ನಾಲ್ಕು ದಿನಗಳಿಂದ ದೇಶದಲ್ಲಿ ದಾಖಲಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳಿಗಿಂತಲೂ ಚೇತರಿಕೆ ಪ್ರಮಾಣವೇ ಅಧಿಕವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!