ದೇಶ

ದೆಹಲಿ ಗಲಭೆ: ಉಮರ್ ಖಲೀದ್ ಗೆ ಅಕ್ಟೋಬರ್ 22ವರೆಗೆ ನ್ಯಾಯಾಂಗ ಬಂಧನ 

Srinivasamurthy VN

ನವದೆಹಲಿ: ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಾಹರ್‍ಲಾಲ್ ನೆಹರು ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿ ಮುಖಂಡ ಉಮರ್ ಖಲೀದ್‍ಗೆ ಅಕ್ಟೋಬರ್ 22ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕಳೆದ ಸೆಪ್ಟೆಂಬರ್ 13ರಂದು ಬಂಧನಕ್ಕೀಡಾಗಿದ್ದ ಉಮರ್ ಖಲೀದ್ ರನ್ನು ಇಂದು ಹೆಚ್ಚುವರಿ ಸೆಷನ್ ಕೋರ್ಟ್ ನ್ಯಾಯಾಧೀಶರಾದ ಅಮಿತಾಬ್ ರಾವತ್ ಅವರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಧೀಶರು ಉಮರ್ ಖಲೀದ್ ರನ್ನು ಅಕ್ಟೋಬರ್ 22ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ಕಳೆದ ಡಿಸೆಂಬರ್ ನಲ್ಲಿ ನಡೆದಿದ್ದ ಹಿಂಸಾಚಾರದಲ್ಲಿ ಈತ ಭಾಗಿಯಾಗಿದ್ದ ಮತ್ತು ಪ್ರಚೋದನೆ ನೀಡಿದ್ದ ಎಂದು ಆರೋಪಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸುತ್ತಿರುವ ದೆಹಲಿ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದ್ದಾರೆ. ಕೆಲ ವಿದ್ಯಾರ್ಥಿಗಳನ್ನು ಪ್ರಚೋದಿಸಿ ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಲು ಉಮರ್ ಖಲೀದ್ ಸೂಚಿಸಿದ್ದ ಮತ್ತು ಕೆಲವು ಕಡೆ ಈತನೂ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

SCROLL FOR NEXT