ದೇಶ

ಜಮ್ಮು-ಕಾಶ್ಮೀರ, ಲಡಾಖ್ ಪ್ರದೇಶಗಳ ಸೇರಿದಂತೆ 43 ಮಹತ್ವದ ಸೇತುವೆ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ

Manjula VN

ನವದೆಹಲಿ: ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳ ಮಹತ್ವದ 17 ಹೊಸ ಸೇತುವೆಗಳು ಸೇರಿದಂತೆ ಸೇರಿದಂತೆ ಏಳು ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 43 ಸೇತುವೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಮುಂದೂಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ 47 ಹೊಸ ಸೇತುವೆಗಳನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ಮಾಡಲಿದ್ದರು. ಆದರೆ, ಕೇಂದ್ರ ಸಚಿವ ಸುರೇಶ್ ಅಂಗಡಿಯವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಸಂತಾಪ ಸೂಚಿಸುವ ಸಲುವಾಗಿ ಕಾರ್ಯಕ್ರಮವನ್ನುಮುಂದೂಡಲಾಗಿದೆ ಎಂದು ತಿಳಿದುಬಂದಿದೆ. 

ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳ 17 ಹೊಸ ಸೇತುವೆ ಸೇರಿದಂತೆ 7 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ 43 ಸೇತುವೆಗಳನ್ನು ಗಡಿ ರಸ್ತೆಗಳ ಸಂಸ್ಥೆ (ಬಿಆರ್‌ಒ) ನಿರ್ಮಿಸಿದೆ. 

SCROLL FOR NEXT