ದೇಶ

ಕೋವಿಡ್-19: ಸತತ 5ನೇ ದಿನ ಸೋಂಕಿತರ ಸಂಖ್ಯೆಗಿಂತ ಗುಣಮುಖರ ಸಂಖ್ಯೆ ಹೆಚ್ಚು

Srinivasamurthy VN

ನವದೆಹಲಿ: ಭಾರತದಲ್ಲಿ ಕೊರೋನಾ ಅಬ್ಬರ ನಡುವೆಯೇ ಹೊಸ ಸೋಂಕಿತರ ಸಂಖ್ಯೆಗಿಂತ ದಿನೇ ದಿನೇ ಗುಣಮುಖರಾಗುತ್ತಿರುವವರ ಸಂಖ್ಯೆಯೇ ಹೆಚ್ಚಾಗಿದೆ.

ಹೌದು... ಭಾರತದಲ್ಲಿ ಸತತ ಐದನೇ ದಿನವೂ ಹೊಸ ಸೋಂಕಿತರ ಸಂಖ್ಯೆಗಿಂತ ಗುಣಮುಖರಾಗುತ್ತಿರುವ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 86,508 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ ದೇಶಾದ್ಯಂತ 89,746 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. 

ನಿನ್ನೆಯೂ ಕೂಡ ದೇಶದಲ್ಲಿ ದಾಖಲೆಯ 1,01468 ಮಂದಿ ಸೋಂಕಿತರು ಗುಣಮುಖರಾಗಿದ್ದರು. ಇದೀಗ ದೇಶದಲ್ಲಿ ಒಟ್ಟಾರೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 46,74,988ಕ್ಕೆ ಏರಿಕೆಯಾಗಿದೆ. ಈ ಹಿಂದೆ ಸೆಪ್ಟೆಂಬರ್ 19ರಂದು ದೇಶಾದ್ಯಂತ 93, 337 ಮಂದಿ ಸೋಂಕಿಗೆ ತುತ್ತಾಗಿದ್ದರೆ, 95880 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರು. ಇದೀಗ ಸತತ ಐದನೇ ದಿನವೂ ದೇಶದಲ್ಲಿ ಹೊಸ ಸೋಂಕಿತರ ಪ್ರಮಾಣಕ್ಕಿಂತ ಗುಣಮುಖರ ಪ್ರಮಾಣ ಏರಿಕೆಯಾಗಿದೆ.

SCROLL FOR NEXT