ದೇಶ

ಕೊರೋನಾ ಪರೀಕ್ಷೆಯಲ್ಲಿ ಭಾರತ ಹೊಸ ದಾಖಲೆ, ಒಂದೇ ದಿನ 14 ಲಕ್ಷಕ್ಕೂ ಹೆಚ್ಚು ಜನರಿಗೆ ಪರೀಕ್ಷೆ!

Manjula VN

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯದಲ್ಲಿ ಗಮನಾರ್ಹ ವೃದ್ಧಿ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ ಬರೋಬ್ಬರಿ 14,92,409 ಜನರ ಕೊರೋನಾ ವೈರಾಣು ಸ್ಯಾಂಪಲ್ ಗಳನ್ನು ಪರೀಕ್ಷಿಸಲಾಗಿದೆ. 

ಇದರಂತೆ ಕೊರೋನಾ ಪರೀಕ್ಷೆ ನಡೆಸುವಲ್ಲಿ ಅಮೆರಿಕಾವನ್ನು ಹಿಂದಿಕ್ಕಿರುವ ಭಾರತ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಈ ವರೆಗೂ ದೇಶದಲ್ಲಿ ಒಟ್ಟಾರೆ 6,89,28,440 ಲಕ್ಷಕ್ಕೂ ಹೆಚ್ಚು ಜನರಿಗ ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಈ ನಡುವೆ ದೇಶದಲ್ಲಿ ಕೊರೋನಾ ವೈರಸ್ ಅಬ್ಬರ ಕೊಂಚ ಮಟ್ಟಿಗೆ ಇಳಿಕೆ ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ 86,052 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 58,18,571 ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

SCROLL FOR NEXT