ದೇಶ

ಹೊಸ ಕೃಷಿ ಮಸೂದೆ ರೈತರನ್ನು ಗುಲಾಮಗಿರಿಗೆ ತಳ್ಳುತ್ತದೆ: ರಾಹುಲ್ ಗಾಂಧಿ

Shilpa D

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆಯಿಂದ ರೈತರು ಗುಲಾಮಗಿರಿಗೆ ಒಳಗಾಗಗುತ್ತಾರೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ.

ದೇಶಾದ್ಯಂತ ರೈತರು ನಡೆಸುತ್ತಿರುವ ಭಾರತ್ ಬಂದ್ ಗೆ ಬೆಂಬಲ ವ್ಯಕ್ತ ಪಡಿಸಿರುವ ರಾಹುಲ್ ಗಾಂಧಿ ಮೂರು ಮಸೂದೆಗಳು ರೈತ ವಿರೋಧಿಯಾಗಿವೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಇನ್ನೂ ಭಾರತ್ ಬಂದ್ ಗೆ ಬೆಂಬಲ ಸೂಚಿಸಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದು, ಹೊಸ ಮಸೂದೆಯಿಂದ ರೈತರು ಕೋಟ್ಯಾಧಿಪತಿಗಳ ದಾಸರಾಗಲಿದ್ದಾರೆ ಎಂದು ಹೇಳಿದ್ದಾರೆ.

ರೈತರು ತಮ್ಮದೇ ಭೂಮಿಯಲ್ಲಿ ಕೂಲಿಗಳಾಗಿ ಕೆಲಸ ಮಾಡಬೇಕಾಗಿದೆ, ಇದು ಈಸ್ಟ್ ಇಂಡಿಯಾ ಕಂಪನಿಯ ಆಡಳಿತವನ್ನು ಮತ್ತೆ ನೆನಪಿಗೆ ತರಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
 

SCROLL FOR NEXT