ಸಾಂದರ್ಭಿಕ ಚಿತ್ರ 
ದೇಶ

10 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.75 ರಷ್ಟು ಹೊಸ ಕೋವಿಡ್ -19 ಪ್ರಕರಣ: ಕೇಂದ್ರ

ದೇಶದಲ್ಲಿ ಒಂದು ದಿನದಲ್ಲಿ ವರದಿಯಾದ 85,362 ಹೊಸ ಕೊರೋನಾ ವೈರಸ್ ಪ್ರಕರಣಗಳಲ್ಲಿ ಶೇ. 75. ರಷ್ಟು ಪ್ರಕರಣಗಳು 10 ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ನವದೆಹಲಿ: ದೇಶದಲ್ಲಿ ಒಂದು ದಿನದಲ್ಲಿ ವರದಿಯಾದ 85,362 ಹೊಸ ಕೊರೋನಾ ವೈರಸ್ ಪ್ರಕರಣಗಳಲ್ಲಿ ಶೇ. 75. ರಷ್ಟು ಪ್ರಕರಣಗಳು 10 ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಕೊರೋನಾ ವೈರಸ್ ಸೋಂಕನ್ನು ಪತ್ತೆ ಹಚ್ಚಲು ಭಾರತ ಒಟ್ಟು ಏಳು ಕೋಟಿ ಕೋವಿಡ್-19 ಪರೀಕ್ಷೆಗಳನ್ನು ನಡೆಸಿದೆ ಮತ್ತು ದೇಶದಲ್ಲಿ ಪರೀಕ್ಷಾ ಸಾಮರ್ಥ್ಯವು ದಿನಕ್ಕೆ 14 ಲಕ್ಷ ದಾಟಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತಮಿಳುನಾಡು, ಉತ್ತರ ಪ್ರದೇಶ, ಒಡಿಶಾ, ದೆಹಲಿ, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದಲ್ಲಿ ಶೇ.75 ರಷ್ಟು ಪ್ರಕರಣಗಳು ವರದಿಯಾಗಿವೆ.

ಇಂದು ಮಹಾರಾಷ್ಟ್ರದಲ್ಲಿ 17,000 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಕೋವಿಡ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಕ್ರಮವಾಗಿ 8,000 ಮತ್ತು 7,000 ಪ್ರಕರಣಗಳು ವರದಿಯಾಗಿವೆ ಎಂದು ಸಚಿವಾಲಯ ತಿಳಿಸಿದೆ.

ಅಲ್ಲದೆ, ಮಹಾರಾಷ್ಟ್ರ, ಪಂಜಾಬ್, ಉತ್ತರ ಪ್ರದೇಶ, ತಮಿಳುನಾಡು, ಕರ್ನಾಟಕ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ಮಧ್ಯಪ್ರದೇಶ, ದೆಹಲಿ ಮತ್ತು ಛತ್ತೀಸ್‌ಗಢದಲ್ಲಿ ಒಂದು ದಿನದಲ್ಲಿ ಶೇ. 83 ರಷ್ಟು ಸಾವು ದಾಖಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ