ಕೇಂದ್ರ ಚುನಾವಣಾ ಆಯೋಗದ ಅಧ್ಯಕ್ಷ ಸುನಿಲ್ ಅರೋರಾ 
ದೇಶ

ಸೆ.29ರಂದು ಉಪ ಚುನಾವಣೆ ಕುರಿತು ನಿರ್ಧಾರ: ಕೇಂದ್ರ ಚುನಾವಣಾ ಆಯೋಗ

ಸೆಪ್ಟೆಂಬರ್ 29ರಂದು ಉಪ ಚುನಾವಣೆ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗದ ಅಧ್ಯಕ್ಷ ಸುನಿಲ್ ಅರೋರಾ ಅವರು ಹೇಳಿದ್ದಾರೆ.

ನವದೆಹಲಿ: ಸೆಪ್ಟೆಂಬರ್ 29ರಂದು ಉಪ ಚುನಾವಣೆ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗದ ಅಧ್ಯಕ್ಷ ಸುನಿಲ್ ಅರೋರಾ ಅವರು ಹೇಳಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣಾ ದಿನಾಂಕದ ಕುರಿತು ಘೋಷಣೆ ಕುರಿತು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಕಾರಣಗಳಿಂದ ತೆರವಾಗಿರುವ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳ ಸ್ಥಾನಕ್ಕೆ ಉಪಚುನಾವಣೆ ನಡೆಸುವ ಬಗ್ಗೆ ಸೆ.29ರಂದು ತೀರ್ಮಾನಿಸಲಾಗುವುದೆಂದು ಹೇಳಿದರು.

ಕರ್ನಾಟಕದ 2, ಮಧ್ಯಪ್ರದೇಶದ 27 ಸೇರಿ ವಿವಿಧ ರಾಜ್ಯಗಳ 64 ಅಸೆಂಬ್ಲಿ ಹಾಗೂ ಬಿಹಾರದ ವಾಲ್ಮೀಕಿ, ತಮಿಳುನಾಡಿನ ಕನ್ಯಾಕುಮಾರಿ, ಕರ್ನಾಟಕದ ಬೆಳಗಾವಿ ಸೇರಿ 4 ಲೋಕಸಭಾ ಕ್ಷೇತ್ರಗಳು ಖಾಲಿ ಇವೆ. ಚತ್ತೀಸ್‌ಗಢ, ಹರಿಯಾಣ, ಕರ್ನಾಟಕ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಒಂದು ವಿಧಾನಸಭೆ ಮತ್ತು ಅಸ್ಸಾಂ, ಜಾರ್ಖಂಡ್, ಕೇರಳ, ನಾಗಾಲ್ಯಾಂಡ್, ತಮಿಳುನಾಡು ಮತ್ತು ಒಡಿಶಾದಲ್ಲಿ ತಲಾ ಎರಡು ಸ್ಥಾನಗಳು, ಮಣಿಪುರದಲ್ಲಿ ಐದು ವಿಧಾನಸಭೆ ಮತ್ತು ಗುಜರಾತ್ ಮತ್ತು ಉತ್ತರಪ್ರದೇಶದಲ್ಲಿ ತಲಾ ಎಂಟು ಸ್ಥಾನಗಳು ಖಾಲಿ ಇವೆ ಎಂದು ಆಯೋಗ ಮಾಹಿತಿ ನೀಡಿದೆ. 

ಈಗಾಗಲೇ ಈ ಸಂಬಂಧ ಚುನಾವಣಾ ಆಯೋಗದ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಈ ಹಿಂದೆ ಬಿಹಾರ ವಿಧಾನಸಭೆ ಚುನಾವಣೆಯೊಂದಿಗೇ ಉಪ ಚುನಾವಣೆ ನಡೆಸುವಸಾಧ್ಯತೆ ಇದೆ ಎಂದು ಹೇಳಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್