ಎಎಪಿ ತೊರೆದು ಕಾಂಗ್ರೆಸ್ಗೆ ಮರುಸೇರ್ಪಡೆಗೊಂಡ ಅಜೋಯ್ ಕುಮಾರ್
ಕಳೆದ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೇರಲು ಕಾಂಗ್ರೆಸ್ ತೊರೆದಿದ್ದ ಅಜೊಯ್ ಕುಮಾರ್ ಈಗ ಭಾನುವಾರ ಮತ್ತೊಮ್ಮೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ನವದೆಹಲಿ: ಕಳೆದ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೇರಲು ಕಾಂಗ್ರೆಸ್ ತೊರೆದಿದ್ದ ಅಜೊಯ್ ಕುಮಾರ್ ಈಗ ಭಾನುವಾರ ಮತ್ತೊಮ್ಮೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಜಾರ್ಖಂಡ್ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಅಜೊಯ್ ಕುಮಾರ್ ಅವರು ಪಕ್ಷಕ್ಕೆ ಸೇರುವ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮತಿಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅಜೊಯ್ ಕುಮಾರ್, "ಸಂಪೂರ್ಣ ಸತ್ಯ ಹೇಳುವ ಅಗತ್ಯವಿದ್ದಾಗ ಮೌನವಾಗಿರುವುದು ಹೇಡಿತನವಾಗುತ್ತದೆ-ಮಹತ್ಮಾಗಾಂಧಿ. ನಾನು ರಾಹುಲ್ ಗಾಂಧಿಯಿಂದ ಸ್ಫೂರ್ತಿ ಪಡೆದಿದ್ದೇನೆ ಎಂದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.