ದೇಶ

ಭಾರತದಲ್ಲಿ ಕೊರೋನಾ ಅಬ್ಬರ: ಒಂದೇ ದಿನ 88,600 ಕೇಸ್ ಪತ್ತೆ, 59.92 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ 

Manjula VN

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 88,600 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 59,92,533ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. 

ಇನ್ನು ಒಂದೇ ದಿನ  ಬರೋಬ್ಬರಿ 1,124 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 93,379ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ. 

59,92,533 ಮಂದಿ ಸೋಂಕಿತರ ಪೈಕಿ 49,41,628 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 9,56,402 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ದೇಶಾದ್ಯಂತ 24 ಗಂಟೆಗಳಲ್ಲಿ 9,87,861 ಕೋವಿಡ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 9,87,861 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 9,87,861 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.26 ರವರೆಗೂ 7,12,57,836 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

SCROLL FOR NEXT