ದೇಶ

ನೂತನ ಕೃಷಿ ಕಾಯ್ದೆ ವಿರುದ್ಧ ಪಂಜಾಬ್ ಸರ್ಕಾರ ಸುಪ್ರೀಂ ಮೆಟ್ಟಿಲೇರಲಿದೆ: ಅಮರಿಂದರ್ ಸಿಂಗ್

Lingaraj Badiger

ಖಟ್ಕರ್ ಕಲನ್: ಕೇಂದ್ರ ಸರ್ಕಾರ ಹೊಸದಾಗಿ ಜಾರಿ ತಂದಿರುವ ಕೃಷಿ ಕಾಯ್ದೆ ವಿರುದ್ಧ ನಮ್ಮ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಲಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ರಾಜ್ಯಗಳ ಹಕ್ಕುಗಳನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ ಅವರು, ಕೇಂದ್ರ ರಾಜ್ಯಗಳಿಗೆ ಅಧಿಕಾರ ನಡೆಸಲು ಏನನ್ನು ಬಿಡುತ್ತಿದೆ? ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಪಂಜಾಬ್ ಉಸ್ತುವಾರಿ ಹರೀಶ್ ರಾವತ್, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸುನಿಲ್ ಜಖರ್ ಹಾಗೂ ಇತರ ನಾಯಕರು ಇಂದು ಖಟ್ಕರ್ ಕಲನ್ ಗ್ರಾಮದಲ್ಲಿ ಭಗತ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದರು.

ಇದೇ ವೇಳೆ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು, ಕೇಂದ್ರ ಸರ್ಕಾರ ರೈತ ಸಮುದಾಯವನ್ನೇ ನಾಶ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಕಾಯ್ದೆ ಈಗಾಗಲೇ ಸಂಸತಿನಲ್ಲಿ ಅಂಗೀಕಾರವಾಗಿದ್ದು, ಅದಕ್ಕೆ ರಾಷ್ಟ್ರಪತಿಗಳು ಸಹ ಸಹಿ ಹಾಕಿದ್ದಾರೆ. ಹೀಗಾಗಿ ನಮ್ಮ ಸರ್ಕಾರ ಕೃಷಿ ಕಾಯ್ದೆ ವಿರುದ್ಧ ಸುಪ್ರೀಂ ಮೆಟ್ಟಿಲೇರಲಿದೆ ಎಂದು ಸಿಎಂ ಅಮರಿಂದರ್ ಸಿಂಗ್ ಹೇಳಿದರು.

SCROLL FOR NEXT