ದೇಶ

ಸುಶಾಂತ್ ಸಿಂಗ್ ಸಾವಿಗೆ ನ್ಯಾಯ ದೊರಕಿಸಬೇಕೆಂದು ಒತ್ತಾಯಿಸಿ ನಟನ ಸ್ನೇಹಿತರಿಂದ ಉಪವಾಸ ಸತ್ಯಾಗ್ರಹ

Lingaraj Badiger

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಕೇಂದ್ರ ತನಿಖಾ ದಳ(ಸಿಬಿಐ) ತನಿಖೆ ನಡೆಸುತ್ತಿದೆ. ಆದರೆ ತನಿಖೆಯಲ್ಲಿ ಯಾವುದೇ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ ಎಂದಿರುವ ದಿವಂಗತ ನಟನ ಸ್ನೇಹಿತರಾದ ಗಣೇಶ್ ಹಿವಾಕರ್ ಮತ್ತು ಅಂಕಿತ್ ಆಚಾರ್ಯ ಅವರು ನಟನ ಸಾವಿಗೆ ನ್ಯಾಯ ದೊರಕಿಸಬೇಕೆಂದು ಒತ್ತಾಯಿಸಿ ಅಕ್ಟೋಬರ್ 2ರಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸೋಮವಾರ ಘೋಷಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಕೊಲೆ ಪ್ರಕರಣದಲ್ಲಿ ನ್ಯಾಯ ಕೋರಿ ಮೂರು ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಂದು ಹಿವಾಕರ್ ಮತ್ತು ಆಚಾರ್ಯ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

"ನಾವು ಮೊದಲಿನಿಂದಲೂ ಸುಶಾಂತ್ ಸಿಂಗ್ ರಜಪೂತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದೇವೆ. ಆದರೆ, ಕಳೆದ ಕೆಲವು ದಿನಗಳಿಂದ ಸಿಬಿಐ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ) ತನ್ನ ಕೆಲಸವನ್ನು ಮಾಡುತ್ತಿದೆ ಮತ್ತು ಡ್ರಗ್ಸ್ ಸಂಪರ್ಕವನ್ನು ಹುಡುಕುತ್ತಿದೆ. ಡ್ರಗ್ಸ್ ಮಾಫಿಯಾ ಕೂಡ ಕೊನೆಗೊಳ್ಳಬೇಕೆಂದು ನಾವು ಬಯಸುತ್ತೇವೆ. ಜಾರಿ ನಿರ್ದೇಶನಾಲಯವೂ ತನ್ನ ಕೆಲಸವನ್ನು ಮಾಡುತ್ತಿದೆ "ಎಂದು ಹಿವಾಕರ್ ವೀಡಿಯೊದಲ್ಲಿ ಹೇಳಿದ್ದಾರೆ.

ಪೊಲೀಸರು ಅನುಮತಿ ನೀಡಿದರೆ ನಾವು ದೆಹಲಿಯ ರಾಜ್‌ಘಾಟ್‌ ಅಥವಾ ಮುಂಬೈನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದು ಅವರು ಹೇಳಿದ್ದಾರೆ. ಒಂದು ವೇಳೆ ಈ ಎರಡೂ ನಗರಗಳಲ್ಲೂ ಉಪವಾಸ ಸತ್ಯಾಗ್ರಹ ನಡೆಸಲು ಪೊಲೀಸರಿಂದ ಅನುಮತಿ ನೀಡದಿದ್ದರೆ, ತಮ್ಮ ಸ್ವಂತ ಮನೆಯಲ್ಲಿಯೇ ಉಪವಾಸ ಸತ್ಯಾಗ್ರಹವನ್ನು ನಡೆಸುವುದಾಗಿ ತಿಳಿಸಿದ್ದಾರೆ.

ಜೂನ್ 14 ರಂದು ಸುಶಾಂತ್ ಸಿಂಗ್ ರಜಪೂತ್ ಅವರ ಮುಂಬೈ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ.

SCROLL FOR NEXT