ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 70,589 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 61 ಲಕ್ಷ

24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 70,589 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 61 ಲಕ್ಷ ಗಡಿದಾಟಿದೆ.

ನವದೆಹಲಿ:  24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 70,589 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 61 ಲಕ್ಷ ಗಡಿದಾಟಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 70,589 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 61,45,292ಕ್ಕೆ ಏರಿಕೆಯಾಗಿದೆ.  ಅಂತೆಯೇ ಈ ವರೆಗೂ 51,01,398 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿ 9,47,576 ಸೋಂಕು ಪ್ರಕರಣಗಳು ಮಾತ್ರ ಇವೆ. 

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 776 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಕೊರೋನಾಗೆ ಬಲಿಯಾದ ಸೋಂಕಿತರ ಸಂಖ್ಯೆ 96,318ಕ್ಕೆ ಏರಿಕಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 
 
24 ಗಂಟೆಗಳಲ್ಲಿ  11,42,811 ಕೋವಿಡ್-19 ಪರೀಕ್ಷೆ: ಐಸಿಎಂಆರ್ 
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 11,42,811 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.28ರವರೆಗೂ 7,31,10,041 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ 18 ನಿಮಿಷದಲ್ಲಿ ಜೀವಂತ ಹೃದಯ ಸಾಗಾಟ!