ಪ್ರಿಯಾಂಕಾ ಗಾಂಧಿ 
ದೇಶ

ಮಹಿಳೆಯರ ಸುರಕ್ಷತೆಗೆ ನೀವೇ ಜವಾಬ್ದಾರರು: ಯೋಗಿ ವಿರುದ್ಧ ಹರಿಹಾಯ್ದ ಪ್ರಿಯಾಂಕಾ

ರಾಜ್ಯದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲದಂತಾಗಿದೆ, ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಯೋಗಿ ಆದಿತ್ಯ ನಾಥ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ನವದೆಹಲಿ: ರಾಜ್ಯದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲದಂತಾಗಿದೆ, ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಯೋಗಿ ಆದಿತ್ಯ ನಾಥ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಸೆಪ್ಟಂಬರ್ 14 ರಂದು ಹರ್ತಾಸ್ ಜಿಲ್ಲೆಯಲ್ಲಿ 19 ವರ್ಷದ ದಲಿತ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಸಂಬಂಧ ಪ್ರಿಯಾಂಕಾ ಪ್ರತಿಕ್ರಿಯೆ ನೀಡಿದ್ದಾರೆ. ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಾಗಿ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೆ ಆಕೆ ಸಾವನ್ನಪ್ಪಿದ್ದಾರೆ, 

ಹತ್ರಾಸ್, ಶಹಜಹಾನ್ಪುರ ಮತ್ತು ಗೋರಖ್ಪುರಗಳಲ್ಲಿ ಒಂದರ ನಂತರ ಒಂದರಂತೆ ಅತ್ಯಾಚಾರದ ಘಟನೆಗಳು ರಾಜ್ಯವನ್ನು ಬೆಚ್ಚಿಬೀಳಿಸಿವೆ ಎಂದು ಅವರು ಹೇಳಿದರು.

"ಯುಪಿಯಲ್ಲಿ ಕಾನೂನು ಸುವ್ಯವಸ್ಥೆ ಬಹಳ ಮಟ್ಟಿಗೆ ಹದಗೆಟ್ಟಿದೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ, ಅಪರಾಧಿಗಳು ಮುಕ್ತವಾಗಿ ಅಪರಾಧಗಳನ್ನು ಮಾಡುತ್ತಿದ್ದಾರೆ, ಸಂತ್ರಸ್ತೆ ಸಾವಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಪ್ರಿಯಾಂಕಾ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ