ಬ್ರಹ್ಮೋಸ್ 
ದೇಶ

400 ಕಿ.ಮೀ ಗೂ ಮೀರಿ ಗುರಿ ತಲುಪುವ ಸಾಮರ್ಥ್ಯದ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಮತ್ತೊಂದು ಹಂತದ ಪರೀಕ್ಷೆ ಯಶಸ್ವಿಯಾಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಮತ್ತೊಂದು ಹಂತದ ಪರೀಕ್ಷೆ ಯಶಸ್ವಿಯಾಗಿದೆ. ಗಿದೆ. 

ನವದೆಹಲಿ: ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಮತ್ತೊಂದು ಆವೃತ್ತಿಯ ಪರೀಕ್ಷೆ ಯಶಸ್ವಿಯಾಗಿದೆ. 

400 ಕಿ.ಮೀ ಗೂ ಮೀರಿದ ಟಾರ್ಗೆಟ್ ನ್ನು ತಲುಪಿ ಹೊಡೆದುರುಳಿಸಬಲ್ಲ ಸಾಮರ್ಥ್ಯದ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ ಇದಾಗಿದ್ದು ಭಾರತದ ರಕ್ಷಣಾ ಪಡೆಗೆ ಮತ್ತಷ್ಟು ಬಲ ಬಂದಂತಾಗಿದೆ. ಡಿಆರ್ ಡಿಒದ ಪಿಜೆ-10 ಪ್ರಾಜೆಕ್ಟ್ ನ ಅಡಿಯಲ್ಲಿ ಈ ಸ್ಥಳೀಯ ಬೂಸ್ಟರ್ ನ್ನು ಹೊಂದಿರುವ ಕ್ಷಿಪಣಿಯನ್ನು ತಯಾರಿಸಲಾಗಿದೆ. 

ಸೆ.30 ರಂದು ಪರೀಕ್ಷೆ ಮಾಡಲಾಗಿರುವುದು ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಎರಡನೇ ವಿಸ್ತರಿತ ಶ್ರೇಣಿ ಆವೃತ್ತಿಯಾಗಿದೆ. ಕ್ಷಿಪಣಿಯ ಏರ್‌ಫ್ರೇಮ್‌ ಹಾಗೂ ಬೂಸ್ಟರ್ ನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾಗಿದೆ. ರಷ್ಯಾ ಹಾಗೂ ಭಾರತದ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದ್ದ ಬ್ರಹ್ಮೋಸ್ ಕ್ಷಿಪಣಿ ಪ್ರಾರಂಬಹ್ದಲ್ಲಿ 290- ಕಿ.ಮೀ ಸಂಚರಿಸುವ ಸಾಮರ್ಥ್ಯ ಹೊಂದಿತ್ತು. 

ಲಡಾಖ್ ನಲ್ಲಿ ಚೀನಾ ಗಡಿ ಕ್ಯಾತೆಯ ಹಿನ್ನೆಲೆಯಲ್ಲಿ ಈಗಾಗಲೇ ಬ್ರಹ್ಮೋಸ್ ಕ್ಷಿಪಣಿಗಳನ್ನು ನಿಯೋಜಿಸಿರುವ ಬೆನ್ನಲ್ಲೇ ಈ ವಿಸ್ತರಿತ ಆವೃತ್ತಿಯ ಪರೀಕ್ಷೆ ಯಶಸ್ವಿಯಾಗಿರುವುದು ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್