ದೇಶ

ದೇಶದ ಜನತೆ ಅಪಾಯದಲ್ಲಿರುವಾಗ ಲಸಿಕೆಗಳನ್ನು ರಫ್ತು ಮಾಡುವುದು ಸರಿಯೇ: ರಾಹುಲ್ ಗಾಂಧಿ

Manjula VN

ನವದೆಹಲಿ: ವಿದೇಶಗಳಿಗೆ ಕೋವಿಡ್-19 ಲಸಿಕೆಗಳನ್ನು ರಫ್ತು ಮಾಡುತ್ತಿರುವುದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತೀವ್ರವಾಗಿ ಕಿಡಿಕಾರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದೇಶವಾಸಿಗಳು ಅಪಾಯದಲ್ಲಿರುವಾಗ ಲಸಿಕೆಗಳನ್ನು ರಫ್ತು ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. 

ಲಸಿಕೆ ನೀಡುವಿಕೆಯಲ್ಲಿ ಕೇಂದ್ರ ಸರ್ಕಾರ ಪಕ್ಷಪಾತ ಮಾಡಬಾರದು. ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಕೆಲಸ ಮಾಡಬೇಕು. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಲಸಿಕೆ ಕೊರತೆ ಅತ್ಯಂತ ಗಂಭೀರ ವಿಚಾರವಾಗಿದೆ. ದೇಶದ ಜನರು ಅಪಾಯದಲ್ಲಿರುವಾಗ ಲಸಿಕೆಗಳನ್ನು ರಫ್ತು ಮಾಡುವುದು ಸರಿಯೇ? ಕೇಂದ್ರ ಸರ್ಕಾರ ಪಕ್ಷಪಾತ ಮಾಡದೆ ಎಲ್ಲರಿಗೂ ಲಸಿಕೆ ನೀಡುವ ಕೆಲಸ ಮಾಡಬೇಕು. ಈ ಸಾಂಕ್ರಾಮಿಕ ರೋಗ ಸಂದರ್ಭದಲ್ಲಿ ನಾವೆಲ್ಲರೂ ಒಗ್ಗೂಡಿ ಹೋರಾಡಬೇಕು ಎಂದು ತಿಳಿಸಿದ್ದಾರೆ.

SCROLL FOR NEXT