ನೊಯ್ಡಾದಲ್ಲಿ ಆಸ್ಪತ್ರೆಯೊಂದರ ಬಳಿ ಪರೀಕ್ಷೆಗಾಗಿ ಕಾಯುತ್ತಿರುವ ಜನರು 
ದೇಶ

ಕೋವಿಡ್ -19 ಹೆಚ್ಚಳ: ದೆಹಲಿಯ ಮೆಟ್ರೋ, ಬಸ್ ಗಳಲ್ಲಿ ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ 

ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದನ್ನು ಗಮನಿಸುತ್ತಿರುವ ದೆಹಲಿ ಸರ್ಕಾರ, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ನಿರ್ಬಂಧಗಳನ್ನು ಹೆಚ್ಚಿಸಿ ಶನಿವಾರ ಹೊಸ ಆದೇಶವನ್ನು ಪ್ರಕಟಿಸಿದೆ.

ನವದೆಹಲಿ: ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದನ್ನು ಗಮನಿಸುತ್ತಿರುವ ದೆಹಲಿ ಸರ್ಕಾರ, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ನಿರ್ಬಂಧಗಳನ್ನು ಹೆಚ್ಚಿಸಿ ಶನಿವಾರ ಹೊಸ ಆದೇಶವನ್ನು ಪ್ರಕಟಿಸಿದೆ.

ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಿಸಿರುವ ಹೊಸ ನಿರ್ಬಂಧ ಆದೇಶದ ಪ್ರಕಾರ, ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಶೇಕಡಾ 50 ರಷ್ಟು ಆಸನ ಸಾಮರ್ಥ್ಯ ಬಳಕೆಗೆ ಅವಕಾಶ ನೀಡಲಾಗಿದ್ದು,ಮೆಟ್ರೋ ಬೋಗಿಗಳು ಹಾಗೂ ಬಸ್ ಗಳ ಆಸನಗಳ ಬಳಕೆ ಸಾಮರ್ಥ್ಯವನ್ನು ಶೇಕಡಾ 50ಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. 

ಇದಕ್ಕೂ ಮುನ್ನಾ ಮಾತನಾಡಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಂಪೂರ್ಣ ಲಾಕ್ ಡೌನ್ ಮಾಡುವುದನ್ನು ಸರ್ಕಾರ ಪರಿಗಣಿಸುತ್ತಿಲ್ಲ. ಕೊರೋನಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಅನೇಕ ನಿರ್ಬಂಧಗಳನ್ನು ಜಾರಿಗೊಳಿಸುತ್ತಿರುವುದಾಗಿ ಹೇಳಿದ್ದರು.

ಚಿತ್ರಮಂದಿರಗಳು, ಸಾರ್ವಜನಿಕ ಸಾರಿಗೆ, ರೆಸ್ಟೋರೆಂಟ್ ಗಳು ಶೇ. 50ರಷ್ಟು ಆಸನಗಳ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುವುದು ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆದೇಶದಲ್ಲಿ ತಿಳಿಸಲಾಗಿದೆ. ಖಾಸಗಿ ಕಚೇರಿಗಳು ಮನೆಯಿಂದಲೇ ಕೆಲಸ ಮಾಡಲು ಉತ್ತೇಜಿಸಬೇಕು, ಕಚೇರಿಗಳಲ್ಲಿ ನೌಕರರ ಸಂಖ್ಯೆಯನ್ನು ಕಡಿಮೆಗೊಳಿಸಬೇಕು, ಉನ್ನತ ಮಟ್ಟದ ಗ್ರೇಡ್ 1 ಆಫೀಸರ್, ಗಳು, ಸರ್ಕಾರಿ ಕಚೇರಿಗಳು ಶೇ. 50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ದೆಹಲಿ ಸರ್ಕಾರ ಸೂಚಿಸಿದೆ. 

ಆರೋಗ್ಯ ಇಲಾಖೆ. ಪೊಲೀಸ್, ಹೋಮ್ ಗಾರ್ಡ್, ನಾಗರಿಕ ರಕ್ಷಣೆ, ಅಗ್ನಿ ಶಾಮಕ ಸೇವೆ ಮತ್ತು ಜಿಲ್ಲಾಡಳಿತಗಳು ಯಾವುದೇ ನಿರ್ಬಂಧವಿಲ್ಲದೆ ಕೆಲಸವನ್ನು ಮುಂದುವರೆಸಬೇಕು ಎಂದು ಸರ್ಕಾರ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT