ಬಿಕೆ ಹರಿಪ್ರಸಾದ್ 
ದೇಶ

ಬಿಕೆ ಹರಿಪ್ರಸಾದ್ ಗೆ ಪಶ್ಚಿಮ ಬಂಗಾಳ ಚುನಾವಣಾ ಎಐಸಿಸಿ ಉಸ್ತುವಾರಿ ಹೊಣೆ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು, ಈಗ ಹೆಚ್ಚುವರಿಯಾಗಿ ಎಐಸಿಸಿ ರಾಜ್ಯ ಉಸ್ತುವಾರಿ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ.

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು, ಈಗ ಹೆಚ್ಚುವರಿಯಾಗಿ ಎಐಸಿಸಿ ರಾಜ್ಯ ಉಸ್ತುವಾರಿ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ.

ಪಶ್ಚಿಮ ಬಂಗಾಳ ಎಐಸಿಸಿ ಉಸ್ತುವಾರಿಯಾಗಿದ್ದ ಜಿತಿನ್ ಪ್ರಸಾದ ಅವರಿಗೆ ಇತ್ತೀಚೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರ ಜವಾಬ್ದಾರಿಯನ್ನು ಬಿಕೆ ಹರಿಪ್ರಸಾದ್ ಅವರಿಗೆ ನೀಡಲಾಗುತ್ತಿದೆ.

ಅಸ್ಸಾಂ ವಿಧಾನಸಭಾ ಚುನಾವಣೆಗೆ ಆಕ್ರಮಣಕಾರಿಯಾಗಿ ಪ್ರಚಾರ ನಡೆಸುತ್ತಿದ್ದ ಜಿತಿನ್ ಪ್ರಸಾದ ಅವರಿಗೆ ಈ ವಾರದ ಆರಂಭದಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದಾರೆ.

"ಎಐಸಿಸಿ ಉಸ್ತುವಾರಿ ಜಿತಿನ್ ಪ್ರಸಾದ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅವರ ಜವಾಬ್ದಾರಿಯನ್ನು ನಾನು ವಹಿಸಿಕೊಳ್ಳುತ್ತಿದ್ದೇನೆ" ಎಂದು ಬಿ.ಕೆ. ಹರಿಪ್ರಸಾದ್ ಅವರು ಕೋಲ್ಕತ್ತಾದಿಂದ ದೂರವಾಣಿ ಮೂಲಕ ಪಿಟಿಐಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್