10 ಮಿಲಿಯನ್ ಡೋಸ್ ಲಸಿಕೆ ನೀಡಿದ ಮೊದಲ ರಾಜ್ಯ ಮಹಾರಾಷ್ಟ್ರ!
ಕೋವಿಡ್-19 ಸಾಂಕ್ರಮಿಕಕ್ಕೆ 10 ಮಿಲಿಯನ್ ಡೋಸ್ ಲಸಿಕೆಯನ್ನು ನೀಡಿರುವ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಮಹಾರಾಷ್ಟ್ರ ಪಾತ್ರವಾಗಿದೆ.
ನವದೆಹಲಿ: ಕೋವಿಡ್-19 ಸಾಂಕ್ರಮಿಕಕ್ಕೆ 10 ಮಿಲಿಯನ್ ಡೋಸ್ ಲಸಿಕೆಯನ್ನು ನೀಡಿರುವ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಮಹಾರಾಷ್ಟ್ರ ಪಾತ್ರವಾಗಿದೆ.
ಅಲ್ಲಿನ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಏ.11 ರ ಬೆಳಿಗ್ಗೆ ವರೆಗೂ 10,038,421 ಡೋಸ್ ಗಳಷ್ಟು ಲಸಿಕೆಯನ್ನು ನೀಡಾಲಾಗಿದೆ ಈ ವರೆಗೂ ನೀಡಲಾಗಿರುವ ಗರಿಷ್ಠ ಲಸಿಕೆಯ ಸಂಖ್ಯೆ ಇದಾಗಿದೆ ಎಂದು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಪ್ರದೀಪ್ ವ್ಯಾಸ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಲಸಿಕೆ ಕೊರತೆ ಎದುರಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಕೇಂದ್ರಕ್ಕೆ ಮಾಹಿತಿ ನೀಡಿರುವ ಬೆನ್ನಲ್ಲೆ ಈ ಅಂಕಿ-ಅಂಶಗಳು ಪ್ರಕಟಗೊಂಡಿವೆ.
ಹಾರಾಷ್ಟ್ರ ಕೊರೋನಾ ಲಸಿಕೆ ಕೊರತೆ ಎದುರಿಸುತ್ತಿದೆ ಎಂಬ ವರದಿಗಳ ಮಧ್ಯೆಯೇ ರಾಜ್ಯಕ್ಕೆ ಇದುವರೆಗೆ 1.10 ಕೋಟಿ ಡೋಸ್ ಕೊರೋನಾ ಲಸಿಕೆ ಬಂದಿವೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಶನಿವಾರ ಹೇಳಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.