ದೇಶ

ಕೊರೋನಾ ಸೋಂಕು ನಿಯಂತ್ರಣ; ರಾಜ್ಯದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

Srinivasamurthy VN

ಬೆಂಗಳೂರು: ರಾಜ್ಯದಲ್ಲಿ ಕರೋನ ನಿಯಂತ್ರಿಸಲು ರಾಜ್ಯ ಸರ್ಕಾರ ಕೈಗೊಂಡ ಕೆಲ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ತಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕೆಲವು ಭಾಗಗಳಲ್ಲಿ ಕೊರೊನಾ ಕಫ್ರ್ಯೂ ಸೇರಿದಂತೆ ಕೈಗೊಂಡಿರುವ ಕೆಲ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಬಿಎಸ್‍ವೈಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮೈಕ್ರೋ ಕಂಟೈನ್ಮೆಂಟ್ ಝೋನ್ ಬಗ್ಗೆ  ನಿಗಾ ವಹಿಸಬೇಕು ಹಾಗೂ ಮೈಕ್ರೋ ಕಂಟೈನ್ಮೆಂಟ್ ಝೋನ್‍ನಲ್ಲಿ ಅಗತ್ಯ ಟೆಸ್ಟಿಂಗ್, ಟ್ರೇಸಿಂಗ್ ಹೆಚ್ಚಳ ಮಾಡಬೇಕೆಂದು ಬಿಎಸ್‍ವೈಗೆ, ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ ಎನ್ನಲಾಗಿದೆ.

ಈ ವಿಚಾರವಾಗಿ ಮುಖ್ಯಮಂತ್ರಿ ಬಿಎಸ್‍ವೈ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿರವರೊಂದಿಗೆ ಇಂದು ಮಾತನಾಡಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ತೆಗೆದುಕೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ರಾಜ್ಯದ ಕ್ರಮಗಳ ಬಗ್ಗೆ ಪ್ರಧಾನಿಗಳು  ಮೆಚ್ಚುಗೆ ವ್ಯಕ್ತಪಡಿಸಿ, ಮೈಕ್ರೋಕಂಟೈನ್ಮೆಂಟ್ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಸಲಹೆ ನೀಡಿದ್ದಾರೆ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

SCROLL FOR NEXT