ಪ್ರಧಾನಿ ಮೋದಿ 
ದೇಶ

ಬಂಗಾಳ ಚುನಾವಣೆ; ಮಮತಾ ಬ್ಯಾನರ್ಜಿ 'ಕ್ಲೀನ್ ಬೌಲ್ಡ್', ಬಿಜೆಪಿ ಈಗಾಗಲೇ ಶತಕ ಬಾರಿಸಿದೆ: ಪ್ರಧಾನಿ ಮೋದಿ

ಬಂಗಾಳದ ಚುನಾವಣೆ ಕುರಿತಂತೆ ಕ್ರಿಕೆಟ್ ಕಾಮೆಂಟರಿ ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಧಾನಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳಲ್ಲಿ ಬಂಗಾಳದ ಜನರು ಎಷ್ಟೊಂದು ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಹೊಡೆದಿದ್ದಾರೆ ಎಂದರೆ ಬಿಜೆಪಿ ಈಗಾಗಲೇ ಶತಕ ಬಾರಿಸಿದೆ ಎಂದರು.

ಬರ್ಧಾಮನ್(ಪಶ್ಚಿಮ ಬಂಗಾಳ): ಬಂಗಾಳದ ಚುನಾವಣೆ ಕುರಿತಂತೆ ಕ್ರಿಕೆಟ್ ಕಾಮೆಂಟರಿ ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಧಾನಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳಲ್ಲಿ ಬಂಗಾಳದ ಜನರು ಎಷ್ಟೊಂದು ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಹೊಡೆದಿದ್ದಾರೆ ಎಂದರೆ ಬಿಜೆಪಿ ಈಗಾಗಲೇ ಶತಕ ಬಾರಿಸಿದೆ ಎಂದರು. 

ಬರ್ಧಾಮನ್ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಬಂಗಾಳದಲ್ಲಿ ಟಿಎಂಸಿಗೆ ತೀವ್ರ ಹಿನ್ನಡೆಯಾಗುತ್ತಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಲೀನ್ ಬೌಲ್ಡ್ ಆಗಿದ್ದಾರೆ. ಇದೇ ಆಕ್ರೋಶದಲ್ಲಿ ರಾಜ್ಯದಲ್ಲಿ ಚುನಾವಣಾ ಕರ್ತವ್ಯದಲ್ಲಿರುವ ಕೇಂದ್ರ ಪಡೆಗಳ ವಿರುದ್ಧ ಜನರನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಿದರು.

ಇದೇ ವೇಳೆ, ಪರಿಶಿಷ್ಟ ಜಾತಿಯವರು 'ಭಿಕ್ಷುಕರು' ಎಂದು ದೀದಿಗೆ ತುಂಬಾ ಹತ್ತಿರವಿರುವ ನಾಯಕರೊಬ್ಬರು ಕರೆದಿದ್ದರೂ ಅದಕ್ಕೆ ವಿಷಾದ ವ್ಯಕ್ತಪಡಿಸಲು ಕೇರ್ ಮಾಡುವುದಿಲ್ಲ ಎಂದರು. 

ವಿಧಾನಸಭಾ ಚುನಾವಣೆಯ ಮೊದಲ 4 ಹಂತಗಳಲ್ಲಿ ಬಿಜೆಪಿ ಈಗಾಗಲೇ ಒಂದು ಶತಕ (ಸ್ಥಾನಗಳನ್ನು) ಪೂರೈಸಿದೆ. ಅರ್ಧದಷ್ಟು ಪಂದ್ಯಗಳಲ್ಲಿ(ಆಧಾ ಮೇ ಪೂರಾ ಸಾಫ್) ಟಿಎಂಸಿಯನ್ನು ಅಳಿಸಿಹಾಕಿದ್ದಾರೆ ಎಂದರು. 

'ಬಂಗಾಳದ ಜನರು ನಂದಿಗ್ರಾಮ್ನಲ್ಲಿ ದೀದಿಯನ್ನು ಕ್ಲೀನ್ ಬೌಲ್ ಮಾಡಿದ್ದಾರೆ ಮತ್ತು ಅವರ ಇಡೀ ತಂಡವನ್ನು ಮೈದಾನದಿಂದ ಹೊರಹೋಗುವಂತೆ ಕೇಳಿಕೊಂಡಿದ್ದಾರೆ" ಎಂದು ಅವರು ಹೇಳಿದರು.

ಟಿಎಂಸಿ ಮುಖ್ಯಸ್ಥ ಮಮತಾ ಬ್ಯಾನರ್ಜಿಯವರ "ಮಾ, ಮತಿ, ಮನುಷ್" ಘೋಷಣೆಯನ್ನು ಅಪಹಾಸ್ಯ ಮಾಡಿದ ಪ್ರಧಾನಿ, "ಮಾ" ದೌರ್ಜನ್ಯ, 'ಮತಿ' ಮಾತೃಭೂಮಿ ಲೂಟಿ ಮತ್ತು 'ಮನುಷ್' (ಜನರ) ರಕ್ತಪಾತವು ಅದರ ವಾಸ್ತವವಾಗಿದೆ ಎಂದು ಹೇಳಿದರು.

ಏಪ್ರಿಲ್ 10 ರಂದು ಕೂಚ್ ಬೆಹಾರ್‌ನಲ್ಲಿ ಸಿಐಎಸ್ಎಫ್ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT