ದೇಶ

ಮಹಾರಾಷ್ಟ್ರ: ಕೋವಿಡ್ ಸೋಂಕು ಪ್ರಸರಣ ಹೆಚ್ಚಳ, ಲಾಕ್ ಡೌನ್ ಘೋಷಣೆ ಬಗ್ಗೆ ಏಪ್ರಿಲ್ 14 ರ ನಂತರ ನಿರ್ಧಾರ

Srinivas Rao BV

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕು ಪ್ರಸರಣ ನಿಯಂತ್ರಣಕ್ಕೆ ಸಿಗದೇ ಆತಂಕ ಪರಿಸ್ಥಿತಿ ನಿರ್ಮಾಣವಾಗಿದ್ದು, ಲಾಕ್ ಡೌನ್ ಜಾರಿಗೆ ಬರುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ. 

ಆಮ್ಲಜನಕ ಉತ್ಪಾದನಾ ಘಟಕಗಳ ಸ್ಥಾಪನೆ, ಬೆಡ್ ಗಳ ಸಂಖ್ಯೆ ಹೆಚ್ಚಳ ಮಾಡುವುದು, ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸುವುದು, ರೆಮ್ಡಿಸಿವಿರ್ ಚುಚ್ಚು ಮದ್ದುಗಳ ಲಭ್ಯತೆಯನ್ನು ಖಾತ್ರಿಪಡಿಸಿಕೊಳ್ಳುವುದು ಸೇರಿದಂತೆ ಕೋವಿಡ್-19 ತಡೆಗೆ ಅಗತ್ಯವಿರುವ ಕ್ರಮಗಳ ಬಗ್ಗೆ ಈಗಾಗಲೇ ಸಿಎಂ ಉದ್ಧವ್ ಠಾಕ್ರೆ ಕೋವಿಡ್-19 ಟಾಸ್ಕ್ ಫೋರ್ಸ್ ನೊಂದಿಗೆ  

ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಲಾಕ್ ಡೌನ್ ಘೋಷಣೆ, ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್ಒಪಿ)ಯನ್ನು ತಯಾರಿಸಿ, ಏ.14 ರ ನಂತರ ಅಧಿಕೃತ ಘೋಷಣೆ ಮಾಡಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸುತ್ತಿದೆ. 

ಇದೇ ವೇಳೆ ಮಹಾರಾಷ್ಟ್ರಕ್ಕೆ ಕೋವಿಡ್-19 ಲಸಿಕೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಕಳಿಸಿಕೊಡಬೇಕೆಂದು ಪ್ರಧಾನಿಗಳಿಗೆ ಮನವಿ ಮತ್ತೊಮ್ಮೆ ಮಾಡುವುದಾಗಿ ಉದ್ಧವ್ ಠಾಕ್ರೆ ಹೇಳಿದ್ದಾರೆ. 

SCROLL FOR NEXT