ದೇಶ

ಸುಪ್ರೀಂ ಕೋರ್ಟ್ ಸಿಬ್ಬಂದಿಗಳಿಗೆ ಕೊರೋನಾ: ನಿಗದಿಗಿಂತ ಒಂದು ಗಂಟೆ ತಡವಾಗಿ ನ್ಯಾಯಾಂಗ ಕಲಾಪ ಪ್ರಾರಂಭ

Raghavendra Adiga

ನವದೆಹಲಿ: ಸುಪ್ರೀಂ ಕೋರ್ಟ್ ನ ವಿವಿಧ ಪೀಠಗಳು ಸೋಮವಾರ ಬೆಳಿಗ್ಗೆ ತಮ್ಮ ವೇಳಾಪಟ್ಟಿ ಸಮಯದಿಂದ ಒಂದು ಗಂಟೆ ತಡವಾಗಿ ಕೆಲಸ ಪ್ರಾರಂಭಿಸಲಿದೆ. ಕಾರಣ ಸರ್ವೋಚ್ಚ ನ್ಯಾಯಾಲಯದ ಅನೇಕ ಸಿಬ್ಬಂದಿಗಳಿಗೆ ಕೊರೋನಾ ವೈರಸ್ ಸೋಂಕು ಕಾಣಿಸಿಕೊಂಡಿದೆ.

ಅನೇಕ ಸಿಬ್ಬಂದಿಗಳು ಸೋಂಕಿಗೆ ಒಳಗಾಗಿದ್ದರಿಂದ, ನ್ಯಾಯಾಧೀಶರು ತಮ್ಮ ನಿವಾಸಗಳಿಂದ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಕಾರ್ಯನಿರ್ವಹಿಸಲಿದ್ದಾರೆ.

ನ್ಯಾಯಾಲಯದ ಕೊಠಡಿಗಳು ಸೇರಿದಂತೆ ಇಡೀ ನ್ಯಾಯಾಲಯದ ಆವರಣವನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ.

ಬೆಳಿಗ್ಗೆ 10.30 ಕ್ಕೆ ಪ್ರಾರಂಭವಾಗುವ ನ್ಯಾಯಪೀಠದ ಕಲಾಪಗಳು ಸೋಮವಾರ ಒಂದು ಗಂಟೆ ತಡವಾಗಿ ಪ್ರಾರಂಬವಾಗುತ್ತದೆ ಎಂದು ಅಧಿಸೂಚನೆ ಹೊರಡಿಸಲಾಗಿದೆ.

SCROLL FOR NEXT