ಸ್ಪುಟ್ನಿಕ್ ವಿ 
ದೇಶ

ರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ!

ರಷ್ಯಾದ ಸ್ಪುಟ್ನಿಕ್-ವಿ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಸೋಮವಾರ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಈ ಲಸಿಕೆ ಬಳಕೆಗೆ ಅನುಮೋದನೆ ನೀಡಿದೆ.

ನವದೆಹಲಿ: ರಷ್ಯಾದ ಸ್ಪುಟ್ನಿಕ್-ವಿ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಸೋಮವಾರ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಈ ಲಸಿಕೆ ಬಳಕೆಗೆ ಅನುಮೋದನೆ ನೀಡಿದೆ.

ದೇಶದಲ್ಲಿ ಕೋವಿಡ್ ಲಸಿಕೆ ಕೊರತೆ ಇದೆ ಎಂದು ಕೆಲವು ರಾಜ್ಯಗಳು ಹೇಳಿದ್ದವು.. ಅಲ್ಲದೆ ಈ ವಿಚಾರವಾಗಿ ಕೇಂದ್ರಕ್ಕೆ ಪತ್ರ ಬರೆದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಆ ಮೂಲಕ ದೇಶದಲ್ಲಿ ಬಳಕೆಯಾಗುತ್ತಿರುವ ಮೂರನೇ ಕೋವಿಡ್ ಲಸಿಕೆ ಎಂಬ ಖ್ಯಾತಿಗೂ ಸ್ಪುಟ್ನಿಕ್ ವಿ ಪಾತ್ರವಾದಂತಾಗಿದೆ. ಲಸಿಕೆಯನ್ನು  ರಷ್ಯಾದ ಗಮಾಲೆಯ ರಾಷ್ಟ್ರೀಯ ಸಂಶೋಧನಾ ಕೇಂದ್ರ ಹಾಗೂ ಆರ್‌ಡಿಐಎಫ್ ಅಭಿವೃದ್ಧಿಪಡಿಸಿವೆ. ರಷ್ಯಾ, ಭಾರತ ಸೇರಿ ಹಲವು ದೇಶಗಳಲ್ಲಿ ಮನುಷ್ಯನ ಮೇಲೆ ಪ್ರಯೋಗ ನಡೆದಿದೆ. ಭಾರತದಲ್ಲಿ ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ ಜೊತೆ ರಷ್ಯಾ ಒಪ್ಪಂದ ಮಾಡಿಕೊಂಡಿತ್ತು.

ಈ ಹಿಂದೆ ಏಪ್ರಿಲ್ 1ರಂದು ತಜ್ಞರ ಸಭೆ ನಡೆಸಿದ್ದ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯು (ಸಿಡಿಎಸ್‌ಸಿಒ) ಭಾರತದಲ್ಲಿ ಸ್ಪುಟ್ನಿಕ್-ವಿ ಲಸಿಕೆಯ ಪ್ರಯೋಗಕ್ಕೆ ಸಂಬಂಧಿಸಿದ ದತ್ತಾಂಶಗಳನ್ನು ಒದಗಿಸುವಂತೆ ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ ಸಂಸ್ಥೆಗೆ ಸೂಚಿಸಿತ್ತು. ಗಂಭಿರ ಅಡ್ಡಪರಿಣಾಮಗಳು  ಸೇರಿದಂತೆ ಇತರ ಹಲವು ವಿಷಯಗಳಿಗೆ ಸಂಬಂಧಿಸಿದ ದತ್ತಾಂಶಗಳನ್ನೂ ಒದಗಿಸಲು ತಿಳಿಸಿತ್ತು. ಲಸಿಕೆಯ ಶೇಖರಣಾ ವಿಧಾನ, ಸೂಚನೆಗಳು, ಡೋಸ್‌ ವಿವರ, ವಹಿಸಬೇಕಾದ ಮುನ್ನೆಚ್ಚರಿಕೆಗಳು, ಶೇಖರಣಾ ವ್ಯವಸ್ಥೆಗಳಿಗೆ ಸಂಬಂಧಿಸಿದ ವಿವರಗಳನ್ನೂ ಕೋರಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್