ಸಂಗ್ರಹ ಚಿತ್ರ 
ದೇಶ

ದೇಶದಲ್ಲಿ ಮತ್ತೆ 1.60 ಲಕ್ಷಕ್ಕೂ ಅಧಿಕ ಕೋವಿಡ್ ಸೋಂಕು ಪ್ರಕರಣ ಪತ್ತೆ, 879 ಮಂದಿ ಸಾವು

ದೇಶದಲ್ಲಿ ಮತ್ತೆ ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆ  1.60 ಲಕ್ಷ ದಾಟಿದ್ದು, 879 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನವದೆಹಲಿ: ದೇಶದಲ್ಲಿ ಮತ್ತೆ ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆ  1.60 ಲಕ್ಷ ದಾಟಿದ್ದು, 879 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,61,736 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, 879 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಒಟ್ಟಾರೆ ಕೋವಿಡ್ ಸೋಂಕಿತರ ಸಂಖ್ಯೆ 1,36,89,453ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ  97,168 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಚೇತರಿಕೆಯಾದವರ ಸಂಖ್ಯೆ 1,22,53,697ಕ್ಕೆ ಏರಿಕೆಯಾಗಿದೆ. 

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 879 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 1,71,058ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 12,64,698 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 14,00,122  ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ 25,92,07,108 ಕೋವಿಡ್ ಪರೀಕ್ಷೆಗಳನ್ನು ನಡೆಸಿದಂತಾಗಿದೆ. ಅಂತೆಯೇ ದೇಶದಲ್ಲಿ ಈ ವರೆಗೂ 10,85,33,085 ಡೋಸ್ ಲಸಿಕೆ ನೀಡಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್