ಡಾ ಹರ್ಷ್ ವರ್ಧನ್ 
ದೇಶ

ಲಕ್ಷದ್ವೀಪ ಮತ್ತು ಜಮ್ಮು ಕಾಶ್ಮೀರದ ಬುಡ್ಗಾಮ್ ಜಿಲ್ಲೆ ಕ್ಷಯರೋಗ ಮುಕ್ತ: ಕೇಂದ್ರ ಘೋಷಣೆ

ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪ ಮತ್ತು ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯನ್ನು ಕ್ಷಯರೋಗ ಮುಕ್ತ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ನವದೆಹಲಿ: ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪ ಮತ್ತು ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯನ್ನು ಕ್ಷಯರೋಗ ಮುಕ್ತ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

"ನಾವು ಈಗ ಲಕ್ಷದ್ವೀಪ ಮತ್ತು ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯನ್ನು ಕ್ಷಯರೋಗ ಮುಕ್ತ ಎಂದು ಘೋಷಿಸಿದ್ದೇವೆ. ಇದು ಒಂದು ಹೆಗ್ಗುರುತಾಗಿದ್ದು 2025 ರ ವೇಳೆಗೆ ಭಾರತ ಟಿಬಿ ಮುಕ್ತವಾಗಲು ಇದು ನಾಂದಿಯಾಗಲಿದೆ." ಅವರು ಹೇಳಿದ್ದಾರೆ.

ವಿಶ್ವ ಟಿಬಿ ದಿನದಂದು ಅಂಬೇಡ್ಕರ್ ರಾಷ್ಟ್ರೀಯ ಕೇಂದ್ರದಲ್ಲಿ ಆಯೋಜಿಸಿದ ಕಾರ್ಯಕ್ರಮ ಉದ್ಘಾಟಿಸಿದ್ದ ಸಚಿವರು ಮಾತನಾಡಿದ್ದಾರೆ.

ಪೋಲಿಯೊ ವಿರುದ್ಧದ ಹೋರಾಟವನ್ನು ನೆನಪಿಸಿಕೊಂಡ ಸಚಿವರು 2009 ರ ಹೊತ್ತಿಗೆ ಭಾರತವು ಜಾಗತಿಕ ಪೋಲಿಯೊ ಪ್ರಕರಣಗಳಲ್ಲಿ 60 ಪ್ರತಿಶತಕ್ಕಿಂತ ಹೆಚ್ಚಿನದನ್ನು ಹೊಂದಿದ್ದೂ  ನಾವು ದೇಶದಿಂದ ಪೋಲಿಯೊವನ್ನು ಅಳಿಸಿಹಾಕುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು. ಭಾರತದ ಅಪಾರ ಜನಸಂಖ್ಯೆಯ ಕಾರಣದಿಂದಾಗಿ ಇದು ಒಂದು ದೊಡ್ಡ ಸವಾಲಾಗಿತ್ತು ಎಂದರು. "ಕೋವಿಡ್ ವಿರುದ್ಧದ ನಮ್ಮ ಹೋರಾಟದಲ್ಲಿ ನಾವು ಒಟ್ಟಾಗಿ ಏನನ್ನು ಸಾಧಿಸಬಹುದು ಎಂಬುದನ್ನು ನಾವು ಮತ್ತೆ ಜಗತ್ತಿಗೆ ತೋರಿಸಿದ್ದೇವೆ." ಸಚಿವರು ಹೇ್ಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT