ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ 
ದೇಶ

ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚಳ: ಬುಧವಾರದಿಂದ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೆ

 ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಈ ನಿರ್ಬಂಧಗಳು ಬುಧವಾರ ರಾತ್ರಿ 8 ಗಂಟೆಯಿಂದ ಜಾರಿಗೆ ಬರಲಿವೆ.

ಮುಂಬೈ: ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಈ ನಿರ್ಬಂಧಗಳು ಬುಧವಾರ ರಾತ್ರಿ 8 ಗಂಟೆಯಿಂದ ಜಾರಿಗೆ ಬರಲಿವೆ.

ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುತ್ತಿದ್ದೇವೆ. ನಾಳೆಯಿಂದ ರಾಜ್ಯಾದ್ಯಂತ  ಸೆಕ್ಷನ್ 144 ಜಾರಿಗೊಳಿಸಲಾಗುತ್ತಿದೆ. ಇದನ್ನು ಲಾಕ್ ಡೌನ್ ಎಂದು ಕರೆಯುವುದಿಲ್ಲ ಎಂದು ರಾಜ್ಯವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಉದ್ದವ್ ಠಾಕ್ರೆ ತಿಳಿಸಿದರು.

ಕೋವಿಡ್ ಗೆ ನೆರವಾಗಲು ಬಯಸುತ್ತಾರಾ ಅಥವಾ ಸೋಂಕು ನಿಯಂತ್ರಿಸಲು ಕೆಲಸ ನಿರ್ವಹಿಸುತ್ತಿರುವ ಸರ್ಕಾರದೊಂದಿಗೆ ಕೈ ಜೋಡಿಸುತ್ತಾರಾ ಎಂಬುದನ್ನು ಜನರು ನಿರ್ಧರಿಸಬೇಕಾಗಿದೆ ಎಂದು ಹೇಳಿದ ಮುಖ್ಯಮಂತ್ರಿ, ಸ್ಥಳೀಯ ರೈಲು ಸೇವೆ ಸೇರಿದಂತೆ ಸಾರ್ವಜನಿಕ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. 

ಅವಶ್ಯಕ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸಾರ್ವಜನಿಕ ಸ್ಥಳಗಳು, ಎಲ್ಲಾ ಸಂಸ್ಥೆಗಳು ಮುಂದಿನ15 ದಿನಗಳ ಕಾಲ ಮುಚ್ಚಲಿವೆ. ರಸ್ತೆ ಬದಿ ವ್ಯಾಪಾರಿಗಳು ಮತ್ತು ಆಹಾರ ಮಾರಾಟಗಾರರಿಗೆ ಬೆಳಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೂ ಅವಕಾಶ ನೀಡಲಾಗುವುದು, ಅಲ್ಲಿಂದ ಆಹಾರವನ್ನು ಪಾರ್ಸೆಲ್ ತೆಗೆದುಕೊಂಡು ಹೋಗಬೇಕು, ಅಲ್ಲಿಯೇ ಕುಳಿತ ಊಟ ಮಾಡಲು ಅವಕಾಶ ನೀಡುವುದಿಲ್ಲ ಎಂದು ಅವರು ತಿಳಿಸಿದರು.

ಮೆಡಿಕಲ್ ಆಕ್ಸಿಜನ್ ಮತ್ತು ಹಾಸಿಗೆಗಳ ಕೊರತೆಯಿದ್ದು, ಮಹಾರಾಷ್ಟ್ರಕ್ಕೆ ರೆಮಿಡಿಸಿವಿರ್ ಹೆಚ್ಚಿಸುವಂತೆ ಬೇಡಿಕೆ ಸಲ್ಲಿಸಲಾಗಿದೆ. ವಾಯುಪಡೆ ವಿಮಾನಗಳನ್ನು ಬಳಸಿಕೊಂಡು ರಾಜ್ಯದಲ್ಲಿ ಕೊರೋನಾ ವೈರಸ್ ರೋಗಿಗಳಿಗೆ ಕೇಂದ್ರ ಸರ್ಕಾರ ಆಕ್ಸಿಜನ್ ಪೂರೈಸಲು ನೆರವಾಗಬೇಕು. ಕೋವಿಡ್-19 ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಆರೋಗ್ಯ ಸಂಬಂಧಿತ ಮೂಲಸೌಕರ್ಯಗಳು ಒತ್ತಡವಿರುವುದಾಗಿ ಅವರು ಹೇಳಿದರು.

ಅವಶ್ಯಕ ಕೆಲಸಗಾರರಿಗೆ ಮಾತ್ರ ಸ್ಥಳೀಯ ರೈಲು ಸೇವೆ ಸೇರಿದಂತೆ ಸಾರ್ವಜನಿಕ ಸಾರಿಗೆ ಸೇವೆಯನ್ನು ಕಲ್ಪಿಸಲಾಗುವುದು, ಎಲ್ಲಾ ಅವಶ್ಯಕ ಕೈಗಾರಿಕೆಗಳು ಸಂಪೂರ್ಣ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲಿವೆ. ಕೊರೋನಾವೈರಸ್ ನಿರ್ಬಂಧವಿರುವ ಪ್ರದೇಶಗಳಲ್ಲಿನ ಎಲ್ಲಾ ಬಡವರು ಹಾಗೂ ಅಗತ್ಯವಿರುವವರಿಗೆ ಮುಂದಿನ ತಿಂಗಳಿನಿಂದ  ಮೂರು ಕೆಜಿ ಗೋಧಿ ಮತ್ತು ಎರಡು ಕೆಜಿ ಅಕ್ಕಿಯನ್ನು ಸರ್ಕಾರ ವಿತರಿಸಲಿದೆ ಎಂದು ಉದ್ದವ್ ಠಾಕ್ರೆ ತಿಳಿಸಿದರು.

ಮಹಾರಾಷ್ಟ್ರದಲ್ಲಿ ಮಂಗಳವಾರ 60, 212 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 35, 19, 208ಕ್ಕೆ ಏರಿಕೆಯಾಗಿದೆ. 281 ಮಂದಿ ಸಾವಿನೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 58,526ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಕೆ ತಿಳಿಸಿದೆ. ಮುಂಬೈಯಲ್ಲಿ 7,873 ಹೊಸ ಪ್ರಕರಣಗಳು ವರದಿಯಾಗಿದ್ದು,  ಸೋಂಕಿತರ ಒಟ್ಟು ಸಂಖ್ಯೆ 5,35,264ಕ್ಕೆ ಏರಿಕೆಯಾಗಿದೆ. 27 ಮಂದಿ ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 12,093ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT