ಸಂಗ್ರಹ ಚಿತ್ರ 
ದೇಶ

ಕೋವಿಡ್ ಉಲ್ಬಣ: ಸಿಬಿಎಸ್‌ಇ 10 ನೇ ತರಗತಿ ಪರೀಕ್ಷೆ ರದ್ದು, 12 ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ

ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ [ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ)] ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ ಮತ್ತು ಹನ್ನೆರಡನೇ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ.

ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ [ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ)] ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ ಮತ್ತು ಹನ್ನೆರಡನೇ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ.

ಮಂಡಳಿಯು ನಿಗದಿಪಡಿಸಿದ ಮಾನದಂಡದ ಆಧಾರದ ಮೇಲೆ ಹತ್ತನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶವನ್ನು ನೀಡಲಾಗುವುದು ಮತ್ತು ಹನ್ನೆರಡನೇ ತರಗತಿಯ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು.

"10ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಮಂಡಳಿಯು ವಸ್ತುನಿಷ್ಠ ಮಾನದಂಡದ ಆಧಾರದ ಮೇಲೆ ಫಲಿತಾಂಶವನ್ನು ಸಿದ್ಧಪಡಿಸಲಿದೆ" ಎಂದು ಶಿಕ್ಷಣ ಸಚಿವಾಲಯದ (ಎಂಒಇ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಅಂಕಗಳ ಬಗ್ಗೆ ಅಸಮಾಧಾನವಿರುವ ಯಾವುದೇ ಅಭ್ಯರ್ಥಿಗೆ ಪರಿಸ್ಥಿತಿ ಅನುಕೂಲಕರವಾದಾಗ ಪರೀಕ್ಷೆಗಳಿಗೆ ಕುಳಿತುಕೊಳ್ಳಲು ಅವಕಾಶ ನೀಡಲಾಗುವುದು. 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು ಜೂನ್ 1 ರ ನಂತರ ಪರಿಸ್ಥಿತಿಯ ಪರಿಶೀಲನೆ ನಡೆಸಿ  ಪರೀಕ್ಷೆಗಳನ್ನು ನಡೆಸುವ ಮೊದಲು ಕನಿಷ್ಠ 15 ದಿನಗಳ ನೋಟೀಸ್ ನೀಡಲಾಗುತ್ತದೆ".

ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯನ್ನು ನಿಯಂತ್ರಿಸಲು ಭಾರತ ಪ್ರಯತ್ನದಲ್ಲಿರುವಾಗ ಈ ನಿರ್ಧಾರ ಹೊರಬಿದ್ದಿದೆ. ಸಿಬಿಎಸ್‌ಇ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಈ ಹಿಂದೆ ಅಭಿಯಾನವನ್ನು ಪ್ರಾರಂಭಿಸಿದ್ದರು. ಮೇ 4 ರಂದು ಪ್ರಾರಂಭವಾಗಲಿರುವ ಬೋರ್ಡ್ ಪರೀಕ್ಷೆಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಮತ್ತು ಇತರ ಹಿರಿಯ ಶಿಕ್ಷಣ ಅಧಿಕಾರಿಗಳನ್ನು ಭೇಟಿ ಮಾಡಿದ ನಂತರ ಈ ಪ್ರಕಟಣೆ ಹೊರಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್