ದೇಶ

ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್'ಗೆ ಕೊರೋನಾ ಪಾಸಿಟಿವ್

Manjula VN

ಲಖನೌ: ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಬುಧವಾರ ತಿಳಿದುಬಂದಿದೆ.

ತಮಗೆ ಕೊರೋನಾ ಪಾಸಿಟಿವ್ ಬಂದಿರುವ ಕುರಿತು ಸ್ವತಃ ಅಖಿಲೇಶ್ ಯಾದವ್ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ಕೊರೋನಾ ಪರೀಕ್ಷೆಯ ವರದಿ ಈಗಷ್ಟೇ ಬಂದಿದ್ದು, ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೀಗ ನಾನು ಮನೆಯಲ್ಲಿಯೇ ಐಸೋಲೇಷನ್ ನಲ್ಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೂಡಲೇ ಪರೀಕ್ಷೆಗೊಳಪಡುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ. ಸಂಪರ್ಕದಲ್ಲಿದ್ದವರು ಐಸೋಲೇಷನ್ ನಲ್ಲಿರುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ.

ಈ ಹಿಂದೆ ಯೋಗಿ ಆದಿತ್ಯಾನಾಥ್ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ಅವರು ಆರೋಪ ಮಾಡಿದ್ದರು. ಕೊರೋನಾ ನಿಯಂತ್ರಿಸುವಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ತಪ್ಪು ಮಾಹಿತಿಯನ್ನು ಹರಡುತ್ತಿದೆ. ಉತ್ತರಪ್ರದೇಶದಲ್ಲಿ ಕೊರೋನಾ ಲಸಿಕೆ ಹಾಗೂ ಹಾಸಿಗೆಯ ಕೊರತೆ ಇದೆ ಎಂದು ಹೇಳಿದ್ದರು.

SCROLL FOR NEXT