ಕಾಂಗ್ರೆಸ್ ಅಭ್ಯರ್ಥಿ ರೆಜೌಲ್ ಹಕ್ 
ದೇಶ

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೆಜೌಲ್ ಹಕ್ ಕೋವಿಡ್ ಸೋಂಕಿಗೆ ಬಲಿ

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಶಮ್‌ಶೇರ್ ಗುಂಜ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೆಜೌಲ್ ಹಕ್ ಆಸ್ಪತ್ರೆಯಲ್ಲಿ ಕೋವಿಡ್ -19 ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಶಮ್‌ಶೇರ್ ಗುಂಜ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೆಜೌಲ್ ಹಕ್ ಆಸ್ಪತ್ರೆಯಲ್ಲಿ ಕೋವಿಡ್ -19 ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಕೊರೊನಾ‌ ಸೋಂಕು ಇರುವುದು ದೃಢಪಟ್ಟ ನಂತರ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಶ್ಚಿಮ ಬಂಗಾಳದ ಸಂಶೇರ್‌ಗಂಜ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರೆಜೌಲ್‌ ಹಕ್ ಗುರುವಾರ ಮುಂಜಾನೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ರೆಜೌಲ್‌ ಹಕ್‌ ಕಣಕ್ಕಿಳಿದಿದ್ದರು. ಕೆಲವು ದಿನಗಳ ಹಿಂದೆ ಅವರಿಗೆ ಕೋವಿಡ್‌ ಇರುವುದು ದೃಢಪಟ್ಟಿತ್ತು. ಬುಧವಾರ ಅವರು ಜಂಗಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯ ಸ್ಥಿತಿ  ಗಂಭೀರವಾದ ನಂತರ ರೆಜೌಲ್ ಅವರನ್ನು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆಗೆ ಸ್ಪಂದಿಸದೇ, ಗುರುವಾರ ಮುಂಜಾನೆ 5 ಗಂಟೆ ವೇಳೆಗೆ ನಿಧನರಾದರು. ಸಂಶೇರ್‌ಗಂಜ್‌ನಲ್ಲಿ ಏಪ್ರಿಲ್ 26ಕ್ಕೆ ಚುನಾವಣೆ ನಿಗದಿಯಾಗಿತ್ತು. ಏಪ್ರಿಲ್ 26 ರಂದು 7 ನೇ ಹಂತದಲ್ಲಿ ಮತದಾನ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ