ದೇಶ

ಕೊರೋನಾ ಎಫೆಕ್ಟ್: ಹರಿಯಾಣದಲ್ಲಿ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

Lingaraj Badiger

ಚಂಡೀಗಢ: ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮಂಡಳಿ ನಡೆಸಬೇಕಿದ್ದ 10ನೇ ತರಗತಿ ಪರೀಕ್ಷೆಗಳನ್ನು ಹರಿಯಾಣ ಸರ್ಕಾರ ಗುರುವಾರ ರದ್ದುಗೊಳಿಸಿದೆ ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.

ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿದ್ದು, 12 ನೇ ತರಗತಿ ಪರೀಕ್ಷೆಯನ್ನು ಮುಂದೂಡಿದೆ.

ಸಿಬಿಎಸ್‌ಇ ನಿರ್ಧಾರದ ನಂತರ ಈಗ ಹರಿಯಾಣ ಸರ್ಕಾರ ಸಹ ಪ್ರಸ್ತುತ ಕೋವಿಡ್ -19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದ್ದೇವೆ ಎಂದು ಹರಿಯಾಣ ಶಿಕ್ಷಣ ಸಚಿವ ಕನ್ವರ್ ಪಾಲ್ ಹೇಳಿದ್ದಾರೆ.

10ನೇ ತರಗತಿ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ 10ನೇ ತರಗತಿಯ ಫಲಿತಾಂಶವನ್ನು ಘೋಷಿಸಲಾಗುವುದು ಹರಿಯಾಣ ಶಿಕ್ಷಣ ಸಚಿವರು ತಿಳಿಸಿದ್ದಾರೆ.

SCROLL FOR NEXT