ದೇಶ

ಉತ್ತರ ಪ್ರದೇಶದಲ್ಲಿ ಇಂದು 22,439 ಮಂದಿಗೆ ಕೊರೋನಾ ಪಾಸಿಟಿವ್, 10 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ವಿಸ್ತರಣೆ

Lingaraj Badiger

ಲಖನೌ: ಉತ್ತರ ಪ್ರದೇಶದಲ್ಲೂ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಮತ್ತಷ್ಟು ತೀವ್ರವಾಗಿದ್ದು, ಗುರುವಾರ ಬರೋಬ್ಬರಿ 22439 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 2,000ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿರುವ 10 ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ವಿಸ್ತರಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ರಾತ್ರಿ ಕರ್ಫ್ಯೂ ಈಗ ರಾತ್ರಿ 8 ರಿಂದ ಬೆಳಗ್ಗೆ 7 ರವರೆಗೆ ಜಾರಿಯಲ್ಲಿದೆ.

ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿರುವ 10 ಜಿಲ್ಲೆಗಳಲ್ಲಿ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇನ್ನೂ 1-12ನೇ ತರಗತಿಯ ಶಾಲಾ-ಕಾಲೇಜ್ ಬಂದ್ ಆದೇಶವನ್ನು ಮೇ 15 ರವರೆಗೆ ಸಿಎಂ ವಿಸ್ತರಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಇಂದು 22,439 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದು, 114 ಸೋಂಕಿತರು ಮೃತಪಟ್ಟಿದ್ದಾರೆ.

SCROLL FOR NEXT