ದೇಶ

ಕೋವಿಡ್-19 ಏರಿಕೆ: ವೈದ್ಯಕೀಯ ದರ್ಜೆಯ ಆಮ್ಲಜನಕ ಉತ್ಪಾದನೆ, ಪೂರೈಕೆ ಹೆಚ್ಚಳಕ್ಕೆ ಪ್ರಧಾನಿ ಮೋದಿ ಕರೆ

Srinivas Rao BV

ನವದೆಹಲಿ: ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರ ನಡುವೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಮಾಡುವ ಸಾಧನಗಳ ತಯಾರಿಕೆಯನ್ನು ಏರಿಕೆ ಮಾಡುವಂತೆ ಕರೆ ನೀಡಿದ್ದಾರೆ.

ಕೋವಿಡ್-19 ಏರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಸಮರ್ಪಕ ಆಮ್ಲಜನಕ ಸಾಧನಗಳ ಲಭ್ಯತೆಯ ಕುರಿತು ಏ.16 ರಂದು ಸಮಗ್ರ ಪರಿಶೀಲನೆ ನಡೆಸಿದರು

"ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡುವ ಪ್ರಕ್ರಿಯೆಯಲ್ಲಿ ಆಮ್ಲಜನಕ ಪೂರೈಕೆ ಸಾಧನ ಪ್ರಮುಖ ಪಾತ್ರ ವಹಿಸಲಿವೆ. ಈ ಕಾರಣದಿಂದಾಗಿ ಉತ್ಪಾದನೆ ಹೆಚ್ಚಿಸುವಂತೆ ಪ್ರಧಾನಿಗಳು ಕರೆ ನೀಡಿದ್ದಾರೆ ಎಂದು ಪಿಎಂಒ ತಿಳಿಸಿದೆ.

ಸಮಗ್ರ ಪರಿಶೀಲನೆ ವೇಳೆ ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ, ಸ್ಟೀಲ್, ರಸ್ತೆ ಸಾರಿಗೆ ಕೈಗಾರಿಕಾ, ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಗಳಿಂದ ಮಾಹಿತಿಯನ್ನು ಪಡೆದಿದ್ದಾರೆ ಎಂದು ಪಿಎಂಒ ಮಾಹಿತಿ ನೀಡಿದೆ.

SCROLL FOR NEXT