ದೇಶ

ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಗೆ ಕೊರೋನಾ ಸೋಂಕು

Raghavendra Adiga

ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ತಾವು ಕ್ವಾರಂಟೈನ್ ನಲ್ಲಿರುವುದಾಗಿ ಸಿಂಗ್ ಟ್ವೀಟ್ ಮಾಡಿದ್ದಾರೆ.

ಮಧ್ಯಪ್ರದೇಶದ ಮಾಜಿ ಸಿಎಂ ಸಿಂಗ್ ಪ್ರಸ್ತುತ ಅವರ ದೆಹಲಿ ನಿವಾಸದಲ್ಲಿದ್ದಾರೆ.

"ನನ್ನ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ನಾನು ಪ್ರಸ್ತುತ ನನ್ನ ದೆಹಲಿ ನಿವಾಸದಲ್ಲಿದ್ದೇನೆ" ಎಂದು ಮಧ್ಯಪ್ರದೇಶದ ರಾಜ್ಯಸಭಾ ಸಂಸದ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ ಮತ್ತು ಅವರ ಸಂಪರ್ಕಕ್ಕೆ ಬಂದವರೆಲ್ಲರೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಏತನ್ಮಧ್ಯೆ, ಹಿರಿಯ ಎಸ್ಎಡಿ (SAD) ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಹರ್ಸಿಮ್ರತ್ ಕೌರ್ ಬಾದಲ್ ಸಹ ಸೋಂಕಿಗೆ ಪಾಸಿಟಿವ್ ವರದಿ ಪಡೆದಿದ್ದಾರೆ.

ಭಾರತವು ಪ್ರಸ್ತುತ ಕೋವಿಡ್-19 ರ ಹೊಸ ಅಲೆಗೆ ಸಾಕ್ಷಿಯಾಗಿದೆ. ಮಹಾರಾಷ್ಟ್ರ ಮತ್ತು ದೆಹಲಿಯಂತಹ ಹಲವಾರು ರಾಜ್ಯಗಳು ಹೊಸ ಹಾಟ್‌ಸ್ಪಾಟ್‌ಗಳಾಗಿ ಹೊರಹೊಮ್ಮಿದ್ದು, ಸಾರ್ವಜನಿಕರ ಓಡಾಟಕ್ಕೆ  ಅಧಿಕಾರಿಗಳು ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸುವಂತೆ ಒತ್ತಾಯಿಸಿದ್ದಾರೆ. ಈ ವಾರದ ಆರಂಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರಿಗೆ ಕೊರೋನಾ ದೃಢವಾಗಿತ್ತು.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶವು 2.17 ಲಕ್ಷ ಹೊಸ ಕೋವಿಡ್-19 ಪ್ರಕರಣಗಳನ್ನು ವರದಿ ಮಾಡಿದೆ,

SCROLL FOR NEXT