ಸಂಗ್ರಹ ಚಿತ್ರ 
ದೇಶ

ಕುಡಿದು ಬಂದು ಕುಟುಂಬ ಸದಸ್ಯರಿಗೆ ಹೊಡೆಯುತ್ತಿದ್ದ ತಂದೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಪುತ್ರ!

16 ವರ್ಷದ ಬಾಲಕನೊಬ್ಬ ಮದ್ಯದ ಅಮಲಿನಲ್ಲಿದ್ದ ಆತನ ಹೆತ್ತ ತಂದೆಯನ್ನು ಕೊಡಲಿಯಿಂದ ಬರ್ಬರವಾಗಿ ಕೊಚ್ಚಿ ಕೊಂದಿರುವ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ವರದಿಯಾಗಿದೆ.

ಕೋಟಾ(ರಾಜಸ್ಥಾನ): 16 ವರ್ಷದ ಬಾಲಕನೊಬ್ಬ ಮದ್ಯದ ಅಮಲಿನಲ್ಲಿದ್ದ ಆತನ ಹೆತ್ತ ತಂದೆಯನ್ನು ಕೊಡಲಿಯಿಂದ ಬರ್ಬರವಾಗಿ ಕೊಚ್ಚಿ ಕೊಂದಿರುವ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ವರದಿಯಾಗಿದೆ.

ಮುಂಜಾನೆ 3.30 ರ ಸುಮಾರಿಗೆ ಬಾಲಕ ಮನೆಯಲ್ಲಿದ್ದ ಕೊಡಲಿಯನ್ನು ತೆಗೆದುಕೊಂಡು ತಂದೆಯ ಮೇಲೆ ಅನೇಕ ಬಾರಿ ಹಲ್ಲೆ ನಡೆಸಿದನು, ಇದರಿಂದಾಗಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ವೇಳೆ ಕುಟುಂಬದ ಇತರೆ ಸದಸ್ಯರು ಬೇರೆ ಕೋಣೆಯಲ್ಲಿ ಮಲಗಿದ್ದರೆಂದು ಇಟವಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ, ಭಜರಂಗ್ ಲಾಲ್ ಹೇಳಿದ್ದಾರೆ,

ಪ್ರಾಥಮಿಕ ವಿಚಾರಣೆಯಲ್ಲಿ ಮೃತ ಅಬಿದ್ ಅಲಿ (45) ಹತ್ಯೆ ಮತ್ತು ಲೂಟಿ ಸೇರಿದಂತೆ 27 ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾದವನಾಗಿದ್ದ ಎಂದು ತಿಳಿದುಬಂದಿದೆ.

ಆತ ಕೆಲ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದರು. ಅಲ್ಲದೆ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ, ಅಲಿ ತನ್ನ ಹೆಂಡತಿ, ಇಬ್ಬರು ಗಂಡು ಮತ್ತು ಮಗಳನ್ನು ಮದ್ಯದ ಅಮಲಿನಲ್ಲಿ ಹೊಡೆದು ಕಿರುಕುಳ ನೀಡುತ್ತಿದ್ದನೆಂದು ತಿಳಿದುಬಂದಿದೆ.

ಪ್ರಿಮಾ ಫೇಸಿ, ಹತ್ತನೇ ತರಗತಿ ಓದಿತ್ತಿರುವ ಅಪ್ರಾಪ್ತ ಬಾಲಕ ನಿರಂತರವಾಗಿ ಹಿಂಸೆ ಕೊಟ್ಟುದಲ್ಲದೆ ಕುಟುಂಬ ಸದಸ್ಯರಿಗೆ ಹೊಡೆಯುತ್ತಿದ್ದ  ತಂದೆಯನ್ನು ಕೊಲೆ ಮಾಡಿದ್ದಾನೆ ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ,

ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಯಿತು ಮತ್ತು ಅಲಿಯ ಸಹೋದರ ನೀಡಿದ ದೂರಿನ ಮೇರೆಗೆ ಬಾಲಕನ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದಾರೆ, ಆದರೆ ಇದುವರೆಗೆ ಆರೋಪಿಯ ಬಂಧನವಾಗಿಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್