ದೇಶ

ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ಗೆ ಕೊರೋನಾ ಪಾಸಿಟಿವ್

Lingaraj Badiger

ನವದೆಹಲಿ: ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್‌ ಜಾವಡೇಕರ್‌ ಅವರಿಗೆ ಕೋವಿಡ್‌-19 ಪಾಸಿಟಿವ್ ದೃಢಪಟ್ಟಿದೆ.

ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿರುವ ಪ್ರಕಾಶ್ ಜಾವಡೇಕರ್ ಅವರು, ತಮ್ಮ ಜೊತೆಗೆ ಸಂಪರ್ಕಕ್ಕೆ ಬಂದವರು ಪರೀಕ್ಷೆಗೊಳಪಡುವಂತೆ ಮನವಿ ಮಾಡಿದ್ದಾರೆ.

"ನನಗೆ ಇಂದು ಕೋವಿಡ್‌-19 ಸೋಂಕು ದೃಢಪಟ್ಟಿರುವ ವರದಿ ಬಂದಿದೆ. ಕಳೆದ 2-3 ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ದಯವಿಟ್ಟು ಕೋವಿಡ್‌ ಪರೀಕ್ಷೆಗೆ ಒಳಪಡಬೇಕಾಗಿ ವಿನಂತಿಸಿಕೊಳ್ಳುತ್ತೇನೆ" ಎಂದು ಕೇಂದ್ರ ಸಚಿವರು ಟ್ವೀಟ್‌ ಮಾಡಿದ್ದಾರೆ.

ಪ್ರಕಾಶ್ ಜಾವಡೇಕರ್ ಅವರು ಕಳೆದ ತಿಂಗಳು ಪುಣೆಯ ದೀನಾನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದರು.

SCROLL FOR NEXT