ದೀಪ್ ಸಿಧು 
ದೇಶ

ಜಾಮೀನು ಪಡೆದು ಹೊರಬಂದಿದ್ದ ನಟ ದೀಪ್ ಸಿಧು ಮತ್ತೆ ಅರೆಸ್ಟ್!

ಕೆಂಪು ಕೋಟೆಯಲ್ಲಿ ನಡೆದ ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ದೆಹಲಿ ನ್ಯಾಯಾಲಯದಿಂದ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ, ದೆಹಲಿ ಪೊಲೀಸರು ಮತ್ತೆ ನಟ ದೀಪ್ ಸಿಧು ಅವರನ್ನು ಬಂಧಿಸಿದ್ದಾರೆ.

ನವದೆಹಲಿ: ಕೆಂಪು ಕೋಟೆಯಲ್ಲಿ ನಡೆದ ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ದೆಹಲಿ ನ್ಯಾಯಾಲಯದಿಂದ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ, ದೆಹಲಿ ಪೊಲೀಸರು ಮತ್ತೆ ನಟ ದೀಪ್ ಸಿಧು ಅವರನ್ನು ಬಂಧಿಸಿದ್ದಾರೆ.

ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆರ್ಕಿಯಲಾಜಿಕಲ್ ಸರ್ವೆ ಆಫ್ ಇಂಡಿಯಾ ದಾಖಲಿಸಿದ್ದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನಟ ದೀಪ್ ಸಿಧು ಬಂಧನವಾಗಿದೆ.

ಪ್ರತಿಭಟನೆ ವೇಳೆ ಪಾರಂಪರಿಕ ಕಟ್ಟಡದ ಕೆಲವು ಭಾಗಗಳು ಹಾನಿಗೊಳಗಾಗಿದೆ ಎಂದು ಎಎಸ್ಐ ಎಫ್‌ಐಆರ್‌ ದಾಖಲಿಸಿದೆ.

ಈ ಮುನ್ನ ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಟ್ರಾಕ್ಟರ್ ಮೆರವಣಿಗೆಯ ವೇಳೆ ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಫೆಬ್ರವರಿ 9 ರಂದು ಬಂಧಿಸಲ್ಪಟ್ಟಿದ್ದ ದೀಪ್ ಸಿಧುಗೆ ದೆಹಲಿಯ ಸ್ಥಳೀಯ ನ್ಯಾಯಾಲಯವು ಜಾಮೀನು ನೀಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಏಷ್ಯಾದ ಉದ್ವಿಗ್ನತೆ ನಡುವೆ ಮೋದಿ- ಪೆಜೆಶ್ಕಿಯನ್ ಮಾತುಕತೆ: ದೀರ್ಘಕಾಲೀನ, ಪರಸ್ಪರ ಲಾಭದಾಯಕ ಕಾರ್ಯತಂತ್ರಕ್ಕೆ ಒತ್ತು

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

ಬದರಿನಾಥದ 'ತಪ್ತ ಕುಂಡ'ದಲ್ಲಿ 108 ಬಾರಿ ಧಾರ್ಮಿಕ ಸ್ನಾನ: ರಾಜಸ್ಥಾನದ ಇಬ್ಬರು ವೃದ್ಧೆಯರು ಸಾವು!

BRICS 2026: ಪುಟಿನ್-ಮೋದಿ ಮಾತುಕತೆ: ಕಪ್ಪು ಸಮುದ್ರದಲ್ಲಿ ಭಾರತೀಯರ ಸುರಕ್ಷತೆಯ ವಿಷಯ ಪ್ರಸ್ತಾಪ ರಷ್ಯಾ ಅಧ್ಯಕ್ಷ ಹೇಳಿದ್ದೇನು?

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್! "ಡೂಮ್ಸ್ ಡೇ' ವಿಶೇಷತೆ ಏನು ಗೊತ್ತಾ? Video