ದೇಶ

ಮೇವು ಹಗರಣ ಕೇಸ್: ಲಾಲೂ ಪ್ರಸಾದ್ ಯಾದವ್ ಗೆ ಜಾಮೀನು

Raghavendra Adiga

ರಾಂಚಿ: ಜಾರ್ಖಂಡ್ ಹೈಕೋರ್ಟ್ ಮೇವು ಹಗರಣಕ್ಕೆ ಸಂಬಂಧಿಸಿ ಬಿಹಾರದ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾ ದಳ ನಾಯಕ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಿದೆ.

ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಯಾದವ್ ಡುಮ್ಕಾ ಖಜಾನೆ ಪ್ರಕರಣ ಎಂದು ಕರೆಯಲ್ಪಡುವ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದು ಈ ಪ್ರಕರಣದಲ್ಲಿ ಈ ಮುನ್ನ ಬಿಹಾರದಲ್ಲಿದ್ದ ಜಾರ್ಖಂಡ್ ನಗರದ ಖಜಾನೆಯಿಂದ 3.13 ಕೋಟಿ ರೂ. ಅಕ್ರಮವಾಗಿ ಬಳಸಿಕೊಂಡಿದ್ದರು.

ಪ್ರಸ್ತುತ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ನಲ್ಲಿರುವ ಲಾಲೂ ಯಾದವ್ ಬಿಹಾರ ಮೇವಿನ ಹಗರಣಕ್ಕೆ ಸಂಬಂಧಿಸಿದ ನಾಲ್ಕು ಪ್ರಕರಣಗಳಲ್ಲಿ ಮೂರರಲ್ಲಿ ಜಾಮೀನು ಪಡೆದಿದ್ದರು. ಇದೀಗ ನಾಲ್ಕನೇ ಪ್ರಕರಣದಲ್ಲಿಯೂ ಜಾಮೀನು ಸಿಕ್ಕಿರುವ ಕಾರಣ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಮನೆಗೆ ಮರಳಬಹುದು.

2017 ರ ಡಿಸೆಂಬರ್‌ನಿಂದ ಜೈಲಿನಲ್ಲಿರುವ 72 ವರ್ಷದ ಲಾಲೂ ಯಾದವ್ ಜಾರ್ಖಂಡ್‌ನ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ಹೆಚ್ಚಿನ ಜೈಲು ಶಿಕ್ಷೆಯನ್ನು ಅನುಭವಿಸಿದ್ದಾರೆ. ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಜನವರಿಯಲ್ಲಿ ದೆಹಲಿಗೆ ಸ್ಥಳಾಂತರಿಸಲಾಗಿತ್ತು.

SCROLL FOR NEXT