ಮತದಾನ ಮಾಡಲು ಸಾಲಿನಲ್ಲಿ ನಿಂತಿರುವ ಜನ 
ದೇಶ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ: 5ನೇ ಹಂತದ ಮತದಾನ ಆರಂಭ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನಕ್ಕೆ ಪ್ರಧಾನಿ ಮನವಿ

ಪಶ್ಚಿಮ ಬಂಗಾಳ ವಿಧಾನಸಭೆಗೆ 5ನೇ ಹಂತದ ಮತದಾನವು ಶನಿವಾರ ಆರಂಭಗೊಂಡಿದೆ. ಒಟ್ಟು 45 ವಿಧಾನಸಭಾ ಕ್ಷೇತ್ರಗಳ 342 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ. 

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಗೆ 5ನೇ ಹಂತದ ಮತದಾನವು ಶನಿವಾರ ಆರಂಭಗೊಂಡಿದೆ. ಒಟ್ಟು 45 ವಿಧಾನಸಭಾ ಕ್ಷೇತ್ರಗಳ 342 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ. 

ಎಡಪಂಥೀಯ ಮುಖಂಡ, ಸಿಲಿಗುರಿಯ ಮೇಯರ್‌ ಅಶೋಕ್‌ ಭಟ್ಟಾಚಾರ್ಯ, ಸಚಿವರಾದ ಗೌತಮ್‌ದೇವ್‌ ಮತ್ತು ಬ್ರತ್ಯ ಬಸು ಹಾಗೂ ಬಿಜೆಪಿಯ ಸಮಿಕ್‌ ಭಟ್ಟಾಚಾರ್ಯ ಅವರು ಕಣದಲ್ಲಿರುವ ಪ್ರಮುಖರಾಗಿದ್ದಾರೆ.

ತೃಣಮೂಲ ಕಾಂಗ್ರೆಸ್‌ಗೆ ಈ ಹಂತವು ಅತ್ಯಂತ ಮಹತ್ವದ್ದಾಗಿದೆ. 2016ರ ಚುನಾವಣೆಯಲ್ಲಿ ಈ ಭಾಗದ 32 ಕ್ಷೇತ್ರಗಳನ್ನು ಟಿಎಂಸಿ ಮತ್ತು 10 ಸ್ಥಾನಗಳನ್ನು ಕಾಂಗ್ರೆಸ್‌– ಎಡಪಕ್ಷಗಳ ಮೈತ್ರಿ ಕೂಟವು ಗೆದ್ದುಕೊಂಡಿತ್ತು. ಈ ಬಾರಿ ಬಿಜೆಪಿಯು ಇಲ್ಲಿನ ಕೆಲವು ಕ್ಷೇತ್ರಗಳನ್ನು ಕಸಿದುಕೊಳ್ಳುವ ನಿರೀಕ್ಷೆಯಲ್ಲಿದೆ.

‘ಹಿಂದಿನ 4 ಹಂತದ ಮತದಾನದ ಸಂದರ್ಭಗಳಲ್ಲಿ ಅಲ್ಲಲ್ಲಿ ಗಲಭೆಗಳು ನಡೆದಿರುವುದರಿಂದ, 5ನೇ ಹಂತದ ಮತದಾನಕ್ಕೆ ಒಳಗಾಗಲಿರುವ ಕ್ಷೇತ್ರಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆ ನಿಯೋಜಿಸಲಾಗಿದೆ. 

ಕೇಂದ್ರೀಯ ಭದ್ರತಾ ಪಡೆಗಳ 853 ತುಕಡಿಗಳನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಮತದಾನದ ಸಂದರ್ಭದಲ್ಲಿ ಕೋವಿಡ್‌ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು’ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇನ್ನೂ ಮೂರು ಹಂತದ ಚುನಾವಣೆಗಳು ಬಾಕಿ ಇವೆ.

ಈ ನಡುವೆ ದೇಶದ 12 ರಾಜ್ಯಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 2 ಲೋಕಸಭಾ ಕ್ಷೇತ್ರ ಹಾಗೂ 14 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ಆಂಧ್ರಪ್ರದೇಶದ ತಿರುಪತಿ ಹಾಗೂ ಕರ್ನಾಟಕದ ಬೆಳಗಾವಿ ಲೋಕಸಭಾ ಕ್ಷೇತ್ರಗಳು ಮತ್ತು ರಾಜಸ್ಥಾನ (3), ಕರ್ನಾಟಕ (2), ಗುಜರಾತ್‌, ಜಾರ್ಖಂಡ್‌, ಮಧ್ಯಪ್ರದೇಶ, ಮಹಾರಾಷ್ಟ್ರ, ಮಿಜೋರಾಂ, ನಾಗಾಲ್ಯಾಂಡ್‌, ಒಡಿಶಾ, ರಾಜಸ್ಥಾನ, ತೆಲಂಗಾಣ ಹಾಗೂ ಉತ್ತರಾಖಂಡದ (ತಲಾ 1) ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಮನವಿ

ಪಶ್ಚಿಮ ಬಂಗಾಳ ರಾಜ್ಯದಲ್ಲಿ 5ನೇ ಹಂತದ ಮತದಾನ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನವಿ ಮಾಡಿಕೊಂಡಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಪಶ್ಚಿಮ ಬಂಗಾಳ ವಿಧಾನಸಭೆಗೆ 5ನೇ ಹಂತದ ಮತದಾನ ನಡೆಯುತ್ತಿದ್ದು, ಹೆಚ್ಚೆಚ್ಚು ಸಂಖ್ಯೆಯಲ್ಲಿ ಮತದಾನ ಮಾಡಿ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel