ದೇಶ

ಬಾರಾಮತಿ: ನಕಲಿ ರೆಮ್ಡೆಸಿವಿರ್ ಚುಚ್ಚುಮದ್ದು ಮಾರಾಟ: ನಾಲ್ವರ ಬಂಧನ

Srinivasamurthy VN

ಬಾರಾಮತಿ: ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿರುವಂತೆಯೇ ಇತ್ತ ಕೋವಿಡ್ ಚಿಕಿತ್ಸೆಯಲ್ಲಿ ಬಳಸಲಾಗುತ್ತಿರುವ ರೆಮ್ಡೆಸಿವಿರ್ ಚುಚ್ಚುಮದ್ದಿನ ನಕಲಿ ಮಾರಾಟ ಕೂಡ ಹೆಚ್ಚಾಗುತ್ತಿದೆ.

ಮಹಾರಾಷ್ಟ್ರದ ಬಾರಾಮತಿಯಲ್ಲಿ ನಕಲಿ ರೆಮ್ಡೆಸಿವಿರ್ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಮೂರು ಚುಚ್ಚುಮದ್ದುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಲಿಕ್ವಿಡ್ ಪ್ಯಾರಾಸಿಟಮಲ್ ಬಾಟಲಿಗಳ ಮೇಲೆ ರೆಮ್ಡೆಸಿವಿರ್ ಲೇಬಲ್ ಅಂಟಿಸಿ ಅದನ್ನು ಅಸಲಿ ರೆಮ್ಡೆಸಿವಿರ್ ಚುಚ್ಚುಮದ್ದು ಎಂದು ಮಾರಾಟ ಮಾಡುತ್ತಿದ್ದರು ಎಂದು ಪುಣೆ ಗ್ರಾಮಾಂತರ ಜಿಲ್ಲೆಯ ಡಿಎಸ್ ಪಿ ನಾರಾಯಣ್ ಶಿರಗಾಂವ್ಕರ್ ಹೇಳಿದ್ದಾರೆ. 

ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಕಾನ್ಪುರದಲ್ಲಿ ರೆಮ್‌ಡಿಸಿವಿರ್‌ ಚುಚ್ಚು ಮದ್ದನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವೈದ್ಯಕೀಯ ಸಿಬ್ಬಂದಿಗಳನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. ಬಂಧಿತರಿಂದ ರೆಮ್‌ಡಿಸಿವಿರ್ ಚುಚ್ಚುಮದ್ದಿನ 265 ಶೀಷೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.

SCROLL FOR NEXT