ದೇಶ

ದೇಶದಲ್ಲಿ ಕೊರೋನಾ ಸ್ಫೋಟ: ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ 

Sumana Upadhyaya

ನವದೆಹಲಿ: ಕೋವಿಡ್ ಸೋಂಕು ದೇಶದೆಲ್ಲೆಡೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ.

ಈ ತಿಂಗಳು 27ರಿಂದ ಮೂರು ದಿನಗಳ ಕಾಲ ಜೆಇಇ ಮುಖ್ಯ ಪರೀಕ್ಷೆ ನಡೆಯಬೇಕಾಗಿತ್ತು. ಆದರೆ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ, ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪರೀಕ್ಷೆಗಿಂತ 15 ದಿವಸ ಮೊದಲು ಪ್ರಕಟಿಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್ ಟಿಎ) ತಿಳಿಸಿದೆ.

ಜೆಇಇ ಪರೀಕ್ಷೆಯ ಮೊದಲ ಎರಡು ಹಂತ ಕಳೆದ ಫೆಬ್ರವರಿ ಮತ್ತು ಮಾರ್ಚ್ ನಲ್ಲಿ ಮುಗಿದಿದೆ.

SCROLL FOR NEXT