ಮಮತಾ ಬ್ಯಾನರ್ಜಿ 
ದೇಶ

ಇನ್ನು ಮುಂದೆ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರ ನಡೆಸುವುದಿಲ್ಲ: ಟಿಎಂಸಿ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇನ್ನು ಮುಂದೆ ಚುನಾವಣಾ ಪ್ರಚಾರ ನಡೆಸುವುದಿಲ್ಲ ಎಂದು ಟಿಎಂಸಿ ಹೇಳಿದೆ.

ಕೋಲ್ಕತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇನ್ನು ಮುಂದೆ ಚುನಾವಣಾ ಪ್ರಚಾರ ನಡೆಸುವುದಿಲ್ಲ ಎಂದು ಟಿಎಂಸಿ ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒಬ್ರಿಯಾನ್, 'ಮಮತಾ ಬ್ಯಾನರ್ಜಿ ಇನ್ನು ಮುಂದೆ ಕೋಲ್ಕತಾದಲ್ಲಿ ಚುನಾವಣಾ ಪ್ರಚಾರ ನಡೆಸುವುದಿಲ್ಲ. ರಾಜ್ಯ ರಾಜಧಾನಿಯಲ್ಲಿ ನಡೆಯುವ ಪ್ರಚಾರದ ಕೊನೆಯ ದಿನವಾದ ಎಪ್ರಿಲ್ 26ರಂದು ಸಾಂಕೇತಿಕವಾಗಿ ಸಭೆ ನಡೆಸಲಿದ್ದಾರೆ ಎಂದು  ಹೇಳಿದ್ದಾರೆ.

ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ನಿಗದಿಯಾಗಿರುವ ಪ್ರಚಾರ ಸಮಯವನ್ನು ಸಮಯವನ್ನು ಕಡಿತಗೊಳಿಸಲಾಗಿದ್ದು, ಹೀಗಾಗಿ ಮಮತಾ ಬ್ಯಾನರ್ಜಿ ಅವರ ಪ್ರಚಾರ ಸಮಯವನ್ನು ಕೇವಲ 30 ನಿಮಿಷಕ್ಕೆ ನಿರ್ಬಂಧಿಸಲಾಗಿದೆ ಎಂದು ಟಿಎಂಸಿ ರಾಜ್ಯಸಭಾ ಸಂಸದ ಒಬ್ರಿಯಾನ್ ಟ್ವಿಟರ್ ನಲ್ಲಿ  ತಿಳಿಸಿದ್ದಾರೆ.

ಇನ್ನು ಬಂಗಾಳ ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕು ಪ್ರಕರಣಗಳ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಮಮತಾ ಬ್ಯಾನರ್ಜಿ, ತನ್ನ ಪಕ್ಷವು ಕೋಲ್ಕತಾದಲ್ಲಿ ಸಣ್ಣ ಸಭೆಗಳನ್ನು ನಡೆಸಲಿದೆ. ಉಳಿದ ಮೂರು ಹಂತಗಳಲ್ಲಿ ಚುನಾವಣೆ ನಡೆಯುವ ಜಿಲ್ಲೆಗಳಲ್ಲಿ ಕಿರು ಭಾಷಣಗಳನ್ನು ಮಾಡುವೆ ಎಂದು  ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!